ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳು, ವಿಐಪಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಎಲ್ಇಟಿ ಉಗ್ರ ಬಂಧನ
ಜಮ್ಮು ಮತ್ತು ಕಾಶ್ಮೀರದ ರಫಿಯಾಬಾದ್ ಮತ್ತು ಸೋಪೋರ್ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಮತ್ತು ವಿಐಪಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರನನ್ನು ಬಂಧನಕ್ಕೊಳಪಡಿಸುವಲ್ಲಿ ಭಾರತೀಯ ಸೇನಾಪಡೆ ಯಶಸ್ವಿಯಾಗಿದೆ.
Published: 14th May 2022 12:00 PM | Last Updated: 14th May 2022 12:00 PM | A+A A-

ಸಂಗ್ರಹ ಚಿತ್ರ
ರಫಿಯಾಬಾದ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ರಫಿಯಾಬಾದ್ ಮತ್ತು ಸೋಪೋರ್ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಮತ್ತು ವಿಐಪಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರನನ್ನು ಬಂಧನಕ್ಕೊಳಪಡಿಸುವಲ್ಲಿ ಭಾರತೀಯ ಸೇನಾಪಡೆ ಯಶಸ್ವಿಯಾಗಿದೆ.
ಬಂಧಿತ ಉಗ್ರನನ್ನು ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ರಿಜ್ವಾನ್ ಶಾಫಿ ಲೋನ್ ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿ ಆಧಾರದ ಮೇಲೆ ಸೇನಾಪಡೆ, ರಫಿಯಾಬಾದ್ ಪೊಲೀಸರೊಂದಿಗೆ ರೋಹಮಾ ರಫಿಯಾಬಾದ್ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರನನ್ನು ಬಂಧನಕ್ಕೊಳಪಡಿಸಿದೆ ಎಂದು ತಿಳಿದುಬಂದಿದೆ.
ಬಂಧಿತ ಉಗ್ರರನಿಂದ ಒಂದು ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ ಎಂದು ಸೇನೆಯು ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
"ಬಂಧಿತ ಉಗ್ರ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಉಗ್ರ ಸಂಘಟನೆಗೆ ಸೇರಿದವನಾಗಿದ್ದು, ಫಿಯಾಬಾದ್ ಮತ್ತು ಸೋಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ವಿಐಪಿಗಳ ಮೇಲೆ ದಾಳಿ ಮಾಡಿ ಹತ್ಯೆ ನಡೆಸಲು ಸಂಚು ರೂಪಿಸಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.