ದೆಹಲಿಯ ಹನುಮಾನ್ ದೇವಸ್ಥಾನದಲ್ಲಿ ಮಹಾ ಸಿಎಂ ಉದ್ಧವ್ ಠಾಕ್ರೆ ಪದಚ್ಯುತಿಗಾಗಿ ಪ್ರಾರ್ಥಿಸಿದ ರಾಣಾ ದಂಪತಿ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಹಾರಾಷ್ಟ್ರಕ್ಕೆ ದೊಡ್ಡ ಅಪಾಯ ಎಂದಿರುವ ಮಹಾರಾಷ್ಟ್ರ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿ, ಶಾಸಕ ರವಿ ರಾಣಾ ಅವರು, ದೆಹಲಿಯ ಹನುಮಾನ್ ದೇವಸ್ಥಾನದಲ್ಲಿ...
Published: 14th May 2022 04:53 PM | Last Updated: 14th May 2022 04:53 PM | A+A A-

ರಾಣಾ ದಂಪತಿ
ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಹಾರಾಷ್ಟ್ರಕ್ಕೆ ದೊಡ್ಡ ಅಪಾಯ ಎಂದಿರುವ ಮಹಾರಾಷ್ಟ್ರ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿ, ಶಾಸಕ ರವಿ ರಾಣಾ ಅವರು, ದೆಹಲಿಯ ಹನುಮಾನ್ ದೇವಸ್ಥಾನದಲ್ಲಿ ಠಾಕ್ರೆ ಪದಚ್ಯುತಿಗಾಗಿ ಪ್ರಾರ್ಥಿಸಿದ್ದಾರೆ.
ಅಮರಾವತಿ ಲೋಕಸಭಾ ಕ್ಷೇತ್ರದ ಪಕ್ಷೇತರ ಸದಸ್ಯೆ ನವನೀತ್ ರಾಣಾ, ಹಾಗೂ ರವಿ ರಾಣಾ ಅವರು ಇಂದು ರಾಷ್ಟ್ರ ರಾಜಧಾನಿಯ ನಾರ್ತ್ ಅವೆನ್ಯೂ ನಿವಾಸದಿಂದ ಕಾನಾಟ್ ಪ್ಲೇಸ್ನಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ಬಂದು ಪ್ರಾರ್ಥನೆ ಸಲ್ಲಿಸಿದರು.
ಇದನ್ನು ಓದಿ: ಉದ್ಧವ್ ಠಾಕ್ರೆ ಸರ್ಕಾರದಿಂದ ನಮಗೆ ಅನ್ಯಾಯವಾಗುತ್ತಿರುವ ಬಗ್ಗೆ ಪ್ರಧಾನಿ ಮೋದಿಗೆ ದೂರು: ರಾಣಾ ದಂಪತಿ
ರವಿ ರಾಣಾ ಮತ್ತು ಸಂಸದೆ ನವನೀತ್ ರಾಣಾ ಅವರು ದೆಹಲಿಯ ಹನುಮಾನ್ ದೇವಸ್ಥಾನದಲ್ಲಿ ಠಾಕ್ರೆ ಪದಚ್ಯುತಿಗಾಗಿ ಹನುಮಾನ್ ಚಾಲೀಸಾವನ್ನು ಪಠಿಸಿದರು.
ತದನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉದ್ಧವ್ ಠಾಕ್ರೆ ಮಹಾರಾಷ್ಟ್ರಕ್ಕೆ ಎದುರಾಗಿರುವ ದೊಡ್ಡ ಅಪಾಯ. ಮಹಾರಾಷ್ಟ್ರವನ್ನು ಈ ಅಪಾಯದಿಂದ ಮುಕ್ತಗೊಳಿಸಲು ನಾವು ಪ್ರಾರ್ಥನೆ ಸಲ್ಲಿಸಲು ಬಂದಿದ್ದೇನೆ ಎಂದು ಹೇಳಿದರು.
ಮುಂಬೈನಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದ ಹೊರಗೆ ಹನುಮಾನ್ ಚಾಲೀಸಾ ಪಠಣಕ್ಕಾಗಿ ಕರೆ ನೀಡಿದ ನಂತರ ದೇಶದ್ರೋಹದ ಆರೋಪದ ಮೇಲೆ ಕಳೆದ ತಿಂಗಳು ರಾಣಾ ದಂಪತಿಯನ್ನು ಬಂಧಿಸಲಾಗಿತ್ತು ಮತ್ತು 12 ದಿನಗಳ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.