ಚರ್ಚೆಗೆ ಗ್ರಾಸವಾದ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್!
ಆಗಾಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸುವ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಭಾನುವಾರ ಮಾಡಿರುವ ಟ್ವೀಟ್ ವೊಂದು ನೆಟ್ಟಿಗರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
Published: 15th May 2022 02:24 PM | Last Updated: 15th May 2022 02:24 PM | A+A A-

ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ
ನವದೆಹಲಿ: ಆಗಾಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸುವ ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಭಾನುವಾರ ಮಾಡಿರುವ ಟ್ವೀಟ್ ವೊಂದು ನೆಟ್ಟಿಗರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಸರಿಯಾಗಿ ನಿರ್ವಹಿಸದ ಕಾರಣಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಚೀನಾದ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವದಂತಿ ಕುರಿತಾದ ವರದಿಯೊಂದನ್ನು ಉಲ್ಲೇಖಿಸಿರುವ ಸುಬ್ರಮಣಿಯನ್ ಸ್ವಾಮಿ, ಅದು ಸಂಭವಿಸಿದ್ದಲ್ಲಿ ಒಬ್ಬರು ಕೆಳಗಿಳಿಯಲಿದ್ದಾರೆ ಮತ್ತಿಬ್ಬರು ಅದೇ ಹಾದಿ ಹಿಡಿಯಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
Chinese social media abuzz with rumours of Xi Jinping stepping down for COVID-19 mismanagement https://t.co/zvaklxVqrb via @economictimes : It will be, if it happens: One down and two to go.
— Subramanian Swamy (@Swamy39) May 14, 2022
ಆ ಇಬ್ಬರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇರಬಹುದೇ ಎಂದು ನೆಟ್ಟಿಗರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.