ಕಾಶ್ಮೀರಿ ಪಂಡಿತರ ಮೇಲೆ ಅಶ್ರುವಾಯು ಪ್ರಯೋಗ: ತನಿಖೆಗೆ ಆದೇಶಿದ ಲೆಫ್ಟಿನೆಂಟ್ ಗವರ್ನರ್
ಕಾಶ್ಮೀರಿ ಪಂಡಿತ ರಾಹುಲ್ ಭಟ್ ಹತ್ಯೆಯನ್ನು ವಿರೋಧಿಸಿ ಮೇ 13ರಂದು ನಡೆಸಿದ್ದ ಪ್ರತಿಭಟನೆ ವೇಳೆ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರ ಮೇಲೆ ಅಶ್ರುವಾಯು ಶೆಲ್ ದಾಳಿ ನಡೆದಿದ್ದು ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತನಿಖೆಗೆ ಆದೇಶಿಸಿದ್ದಾರೆ.
Published: 15th May 2022 03:20 PM | Last Updated: 15th May 2022 03:23 PM | A+A A-

ಸಂಗ್ರಹ ಚಿತ್ರ
ಶ್ರೀನಗರ: ಕಾಶ್ಮೀರಿ ಪಂಡಿತ ರಾಹುಲ್ ಭಟ್ ಹತ್ಯೆಯನ್ನು ವಿರೋಧಿಸಿ ಮೇ 13ರಂದು ನಡೆಸಿದ್ದ ಪ್ರತಿಭಟನೆ ವೇಳೆ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರ ಮೇಲೆ ಅಶ್ರುವಾಯು ಶೆಲ್ ದಾಳಿ ನಡೆದಿದ್ದು ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತನಿಖೆಗೆ ಆದೇಶಿಸಿದ್ದಾರೆ.
ಈ ಕಾರ್ಯದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಡಳಿತಾತ್ಮಕ ಮೂಲಗಳು ತಿಳಿಸಿವೆ. ಸರ್ಕಾರಿ ಕಚೇರಿಯೊಳಗೆ ಭಯೋತ್ಪಾದಕರು ಸರ್ಕಾರಿ ನೌಕರ ರಾಹುಲ್ ಭಟ್ ಹತ್ಯೆ ಮಾಡಲಾಗಿತ್ತು.
'ರಾಹುಲ್ ಭಟ್ ಹತ್ಯೆಯನ್ನು ಗುರಿಯಾಗಿರಿಸಿಕೊಳ್ಳಲಾಗಿದೆ. ಘಟನೆಯ ನಂತರ ಕಾಶ್ಮೀರಿ ವಲಸಿಗ ಪ್ರತಿಭಟನಾಕಾರರನ್ನು ಚದುರಿಸಲು ಬಲಪ್ರಯೋಗದ ತನಿಖೆಯ ಜೊತೆಗೆ ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಬೇಕು. ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಎಲ್ಲಿಯೂ ಬಲಪ್ರಯೋಗ ಮಾಡದಂತೆ ಆಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಮನೋಜ್ ಸಿನ್ಹಾ ಹೇಳಿದ್ದಾರೆ.
ಮೃತ ರಾಹುಲ್ ಭಟ್ ಪತ್ನಿಗೆ ಉದ್ಯೋಗ ಮತ್ತು ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಸರ್ಕಾರ ನಿರ್ಧರಿಸಿದೆ.
ಭಟ್ ಹತ್ಯೆಯ ತನಿಖೆಗೆ ಎಸ್ಐಟಿ ರಚನೆಯ ಜೊತೆಗೆ, ಚಾದೂರ ಪೊಲೀಸ್ ಠಾಣೆಯ ಠಾಣಾಧಿಕಾರಿ(ಎಸ್ಎಚ್ಒ) ಅವರನ್ನು ಅಮಾನತು ಮಾಡಲಾಗಿದೆ. ಮೇ 12 ರಂದು ಚಾದೂರ ಪೇಟೆಯಲ್ಲಿ ಕಚೇರಿ ವೇಳೆಯಲ್ಲಿ ಭಟ್ ಕೊಲೆಯಾಗಿದ್ದರು.