ಮಧ್ಯಪ್ರದೇಶ: ಬಾಲಕಿ ಮೇಲೆ ಹರಿದ ಪಿಕ್ ಅಪ್ ವಾಹನ; ವಾಹನಕ್ಕೆ ಬೆಂಕಿ ಹಚ್ಚಿ, ಚಾಲಕನನ್ನು ಕೊಂದ ಉದ್ರಿಕ್ತ ಜನ!

ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿಯ ಮೇಲೆ ಪಿಕ್ ಅಪ್ ವಾಹನ ಹರಿಸಿ ಸಾವಿಗೆ ಕಾರಣವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಜನರ ಗುಂಪು ವಾಹನಕ್ಕೆ ಬೆಂಕಿ ಹಚ್ಚಿ ಅದರ ಚಾಲಕನನ್ನು ಬೆಂಕಿಗೆ...

Published: 15th May 2022 11:09 AM  |   Last Updated: 15th May 2022 11:09 AM   |  A+A-


mp

ಸಾಂದರ್ಭಿಕ ಚಿತ್ರ

Online Desk

ಅಲಿರಾಜ್‌ಪುರ: ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿಯ ಮೇಲೆ ಪಿಕ್ ಅಪ್ ವಾಹನ ಹರಿಸಿ ಸಾವಿಗೆ ಕಾರಣವಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಜನರ ಗುಂಪು ವಾಹನಕ್ಕೆ ಬೆಂಕಿ ಹಚ್ಚಿ ಅದರ ಚಾಲಕನನ್ನು ಬೆಂಕಿಗೆ ಎಸೆದ ಪರಿಣಾಮ ಆತನೂ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 38 ಕಿಲೋಮೀಟರ್ ದೂರದಲ್ಲಿರುವ ಬರ್ಜಾರ್ ಕ್ರಾಸಿಂಗ್‌ನಲ್ಲಿ ಶುಕ್ರವಾರ ರಾತ್ರಿ ಆರು ವರ್ಷದ ಬಾಲಕಿಯ ಮೇಲೆ ಪಿಕ್-ಅಪ್ ವಾಹನ ಹರಿದು ಬಾಲಕಿ ದಾರುಣವಾಗಿ ಸಾವನ್ನಪ್ಪಿದ್ದಳು. ಇದರಿಂದ ಕೆರಳಿದ ಜನ ವಾಹನಕ್ಕೆ ಬೆಂಕಿ ಹಚ್ಚಿದರು ಎಂದು ಅಧಿಕೃತ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ಸಖಾರಾಮ್ ಸೆಂಗರ್ ಅವರು ಹೇಳಿದ್ದಾರೆ.

ಇದನ್ನು ಓದಿ: ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ, ಅಪಘಾತದಲ್ಲಿ ಡೆಲಿವರಿ ಬಾಯ್ ಸಾವು

“ಜನಸಮೂಹವು ಚಾಲಕ ಮಗನ್ ಸಿಂಗ್(43) ಅವರನ್ನು ಹಿಡಿದು ಥಳಿಸಿ, ವಾಹನಕ್ಕೆ ಬೆಂಕಿ ಹಚ್ಚಿ ಬೆಂಕಿಗೆ ತಳ್ಳಿದ್ದಾರೆ. ಚಾಲಕನಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗುಜರಾತ್‌ನ ದಾಹೋಡ್‌ಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಘಟನೆಯ ವೀಡಿಯೋ ಆಧರಿಸಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
BS yediyurappa

ಬಿಜೆಪಿ ಸಂಸದೀಯ ಮಂಡಳಿಗೆ ಬಿ.ಎಸ್. ಯಡಿಯೂರಪ್ಪ ಸೇರ್ಪಡೆಯಿಂದ 2023 ರ ಕರ್ನಾಟಕ ಚುನಾವಣೆಯಲ್ಲಿ ಪಕ್ಷಕ್ಕೆ ನೆರವಾಗುವುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp