'ಸ್ವತಂತ್ರ ಭಾರತದ ದೊಡ್ಡ ವಿನಾಶ': ದೆಹಲಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆ ಕುರಿತಂತೆ ಕೇಜ್ರಿವಾಲ್ ಆಕ್ರೋಶ!

ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟೀಕಿಸಿದ್ದಾರೆ.

Published: 16th May 2022 03:35 PM  |   Last Updated: 16th May 2022 06:16 PM   |  A+A-


Arvind Kejriwal

ಅರವಿಂದ್ ಕೇಜ್ರಿವಾಲ್

Online Desk

ನವದೆಹಲಿ: ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟೀಕಿಸಿದ್ದಾರೆ. ದೆಹಲಿಯಲ್ಲಿ ಅಕ್ರಮವೆಂದು ಪರಿಗಣಿಸಲಾದ 63 ಲಕ್ಷ ಜನರ ಅಂಗಡಿಗಳು ಮತ್ತು ಮನೆಗಳನ್ನು ಬುಲ್ಡೋಜರ್‌ಗಳು ನೆಲಸಮಗೊಳಿಸಿದರೆ ಅದು ಸ್ವತಂತ್ರ ಭಾರತದ 'ದೊಡ್ಡ ವಿನಾಶ ಎಂದು ಬಣ್ಣಿಸಿದ್ದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಈ ವಿಷಯದ ಕುರಿತು ಆಮ್ ಆದ್ಮಿ ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅರವಿಂದ ಕೇಜ್ರಿವಾಲ್ ಅವರು ದೆಹಲಿಯ ವಿವಿಧ ಭಾಗಗಳಲ್ಲಿ ಬಿಜೆಪಿ ನೇತೃತ್ವದ ಮುನ್ಸಿಪಲ್ ಕಾರ್ಪೊರೇಷನ್‌ಗಳು ನಡೆಸುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನವನ್ನು ವಿರೋಧಿಸಿ ಜೈಲಿಗೆ ಹೋಗಲು ಸಿದ್ಧರಾಗಿರಬೇಕು ಎಂದು ಶಾಸಕರಿಗೆ ಕರೆ ನೀಡಿದರು.

ಬುಲ್ಡೋಜರ್‌ಗಳೊಂದಿಗೆ ಕಾಲೋನಿಗಳಿಗೆ ನುಗ್ಗಿ ಅಂಗಡಿ ಮತ್ತು ಮನೆಯನ್ನು ಧ್ವಂಸ ಮಾಡುತ್ತಿದ್ದಾರೆ.  ಇವುಗಳು ಅಕ್ರಮ ಕಟ್ಟಡಗಳಲ್ಲ ಎಂದು ಸಾಬೀತುಪಡಿಸಲು ಜನ ಕಾಗದ ಪತ್ರಗಳನ್ನು ತೋರಿಸಿದರೂ ಅವರು ಅವುಗಳನ್ನು ಪರಿಶೀಲಿಸುವುದಿಲ್ಲ ಎಂದು ದೂಷಿಸಿದರು.

'ದೆಹಲಿಯನ್ನು ಯೋಜಿತ ರೀತಿಯಲ್ಲಿ ಮಾಡಲಾಗಿಲ್ಲ. ದೆಹಲಿಯ ಶೇಕಡಾ 80 ಕ್ಕಿಂತ ಹೆಚ್ಚು ಪ್ರದೇಶವನ್ನು ಅಕ್ರಮ ಮತ್ತು ಅತಿಕ್ರಮಣ ಎಂದು ಕರೆಯಬಹುದು. ಅಂದರೆ ನೀವು ದೆಹಲಿಯ ಶೇಕಡಾ 80 ಭಾಗವನ್ನು ನಾಶ ನಾಶಪಡಿಸುತ್ತೀರ? ಎಂದು ಆನ್‌ಲೈನ್ ಮೀಟಿಂಗ್ ನಲ್ಲಿ ಕಿಡಿಕಾರಿದರು. ಅತಿಕ್ರಮಣ ವಿರೋಧಿ ಆಂದೋಲನ ನಡೆಸುತ್ತಿರುವ ರೀತಿಗೆ ಎಎಪಿ ಪಕ್ಷದ ವಿರೋಧವಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಹಿಂಸಾಚಾರ ಆರೋಪಿಗಳ ವಿರುದ್ಧ 'ಬುಲ್ಡೋಜರ್' ಬಳಕೆಗೆ ವಿರೋಧ: ಸುಪ್ರೀಂ ಮೆಟ್ಟಿಲೇರಿದ ಜಮಿಯತ್ ಉಲಮಾ

ಕಳೆದ 15 ವರ್ಷಗಳಲ್ಲಿ ಬಿಜೆಪಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನ ಅಧಿಕಾರದಲ್ಲಿತ್ತು. ಹಣ ತೆಗೆದುಕೊಂಡು ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಿದೆ. ಅವರ ಅಧಿಕಾರಾವಧಿ ಮೇ 18ಕ್ಕೆ ಕೊನೆಗೊಳ್ಳಲಿದೆ. ಆದರೆ ಈಗ  ಅಂತಹ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಂವಿಧಾನಿಕ ಶಕ್ತಿ ನಿಮಗೆ ಇದೆಯೇ? ಚುನಾವಣೆ ನಡೆಯಲಿ. ಎಮ್‌ಸಿಡಿಯಲ್ಲಿ ಎಎಪಿ ಅಧಿಕಾರಕ್ಕೆ ಬರಲಿದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಅವರು ಹೇಳಿದರು.

ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿ ಎಎಪಿ ಅಧಿಕಾರಕ್ಕೆ ಬಂದ ಮೇಲೆ ಅತಿಕ್ರಮಣ ಸಮಸ್ಯೆಯನ್ನು ಪರಿಹರಿಸಲಾಗುತ್ತದೆ ಮತ್ತು ಅನಧಿಕೃತ ಕಾಲೋನಿಗಳಲ್ಲಿ ವಾಸಿಸುವ ಜನರು ಮಾಲೀಕತ್ವದ ಹಕ್ಕುಗಳನ್ನು ಪಡೆಯುತ್ತಾರೆ ಎಂದು ಅವರು ಜನರಿಗೆ ಭರವಸೆ ನೀಡಿದರು.


Stay up to date on all the latest ರಾಷ್ಟ್ರೀಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp