ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಲು 'ಕಾಶ್ಮೀರ್ ಫೈಲ್ಸ್' ಕಾರಣ: ಮೆಹಬೂಬಾ
ಕಾಶ್ಮೀರ್ ಫೈಲ್ಸ್ ಸಿನಿಮಾ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರಚೋದನೆ ನೀಡಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಾಬೂಬಾ ಮುಫ್ತಿ ಹೇಳಿದ್ದಾರೆ.
Published: 16th May 2022 03:42 PM | Last Updated: 16th May 2022 06:17 PM | A+A A-

ಕಾಶ್ಮೀರ್ ಫೈಲ್ಸ್, ಮೆಹಬೂಬಾ ಮುಫ್ತಿ
ಜಮ್ಮು: ಕಾಶ್ಮೀರ್ ಫೈಲ್ಸ್ ಸಿನಿಮಾ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರಚೋದನೆ ನೀಡಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಾಬೂಬಾ ಮುಫ್ತಿ ಹೇಳಿದ್ದಾರೆ.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ವಾಸ್ತವ ಸಂಗತಿಯನ್ನು ಮುಚ್ಚಿಡುವ ಮೂಲಕ ಹಿಂದೂ- ಮುಸ್ಲಿಂರ ವಿವಾದವನ್ನಾಗಿಸಲಾಗಿದೆ. ನಾವು ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿದ್ದೇವು. 2010, 2016 ರಲ್ಲಿ ಗರಿಷ್ಠ ಅಶಾಂತಿಯ ಸಂದರ್ಭದಲ್ಲಿ ಯಾವುದೇ ಹತ್ಯೆ ನಡೆದಿಲ್ಲ ಎಂದಿದ್ದಾರೆ.
ಕಾಶ್ಮೀರ್ ಫೈಲ್ಸ್ ವಿವಾದ ನಂತರ ಇದೀಗ ಜ್ಞಾನವಾಪಿ ಮಸೀದಿ ವಿಚಾರವನ್ನು ಮುನ್ನೆಲೆಗೆ ತರಲಾಗಿದೆ. ನಮ್ಮ ಎಲ್ಲಾ ಮಸೀದಿಗಳ ಮೇಲೆ ಕಣ್ಣಿಡಲಾಗಿದೆ. ಎಲ್ಲಾ ಮಸೀದಿಗಳನ್ನು ವಶಕ್ಕೆ ಪಡೆದ ನಂತರ ಎಲ್ಲವೂ ಸರಿಯಾಗಿದೆ ಎನ್ನುತ್ತಾರೆ ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ಸುರಕ್ಷಿತ ಪ್ರದೇಶಗಳಲ್ಲಿ ಪಂಡಿತ ಉದ್ಯೋಗಿಗಳನ್ನು ನಿಯೋಜಿಸಲಾಗುವುದು: ಲೆಫ್ಟಿನೆಂಟ್ ಗವರ್ನರ್!
ಉಗ್ರರಿಂದ ಕಾಶ್ಮೀರಿ ಪಂಡಿತ್ ನೌಕರ ರಾಹುಲ್ ಭಟ್ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರನ್ನು ನಿನ್ನೆ ಭೇಟಿ ಮಾಡಿದ್ದ ಜಮ್ಮು-ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ, 1990ರಲ್ಲಿ ಆದ ತಪ್ಪು ಮರುಕಳಿಸುವುದಿಲ್ಲ ಎಂದು ಭರವಸೆ ನೀಡಿದ್ದರು.
ಕಾಶ್ಮೀರಿ ಪಂಡಿತ್ ನೌಕರರಿಗೆ ಭದ್ರತೆ ಕಲ್ಪಿಸುವಲ್ಲಿ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ಕೇಂದ್ರಾಡಳಿತ ಪ್ರದೇಶದ ಅಲಲ್ಲಿ ಪ್ರತಿಭಟನೆ ನಡೆಯುತ್ತಿದೆ.