ಜಮ್ಮು-ಕಾಶ್ಮೀರ: ಲಷ್ಕರ್ ಭಯೋತ್ಪಾದಕ ಘಟಕ ಭೇದಿಸಿದ ಪೊಲೀಸರು, ಏಳು ಉಗ್ರರ ಬಂಧನ
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಿಷೇಧಿತ ಲಷ್ಕರ್ ಇ ತೊಯ್ಬಾ ಭಯೋತ್ಪಾದಕ ಘಟಕವೊಂದನ್ನು ಭೇದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Published: 17th May 2022 10:33 AM | Last Updated: 17th May 2022 01:45 PM | A+A A-

ಸಾಂದರ್ಭಿಕ ಚಿತ್ರ
ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ನಿಷೇಧಿತ ಲಷ್ಕರ್ ಇ ತೊಯ್ಬಾ ಭಯೋತ್ಪಾದಕ ಘಟಕವೊಂದನ್ನು ಭೇದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಏಳು ಲಷ್ಕರ್ ಇ ತೊಯ್ಬಾ ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಅಪಾರ ಪ್ರಮಾಣದಲ್ಲಿ ಮದ್ದು ಗುಂಡುಗಳು ಮತ್ತು ಶಸಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ಸುರಕ್ಷಿತ ಪ್ರದೇಶಗಳಲ್ಲಿ ಪಂಡಿತ ಉದ್ಯೋಗಿಗಳನ್ನು ನಿಯೋಜಿಸಲಾಗುವುದು: ಲೆಫ್ಟಿನೆಂಟ್ ಗವರ್ನರ್!
ನಾಲ್ಕು ದ್ವಿಚಕ್ರವಾಹನಗಳು ಸೇರಿದಂತೆ ಆರು ವಾಹನಗಳನ್ನು ಕಾರ್ಯಚರಣೆ ವೇಳೆ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.