ಭಯಾನಕ ದೃಶ್ಯ: ಎರಡು ಖಾಸಗಿ ಬಸ್ಗಳ ನಡುವೆ ಭೀಕರ ಡಿಕ್ಕಿ; ವಿಡಿಯೋ ವೈರಲ್!
ತಮಿಳುನಾಡಿನ ಸೇಲಂನಲ್ಲಿ ಎರಡು ಬಸ್ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಾಹನವೊಂದರಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ.
Published: 18th May 2022 03:27 PM | Last Updated: 18th May 2022 03:27 PM | A+A A-

ಬಸ್ ಗಳ ನಡುವಿನ ಅಪಘಾತ ದೃಶ್ಯ
ಚೆನ್ನೈ: ತಮಿಳುನಾಡಿನ ಸೇಲಂನಲ್ಲಿ ಎರಡು ಬಸ್ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ವಾಹನವೊಂದರಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ.
ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಎಡಪ್ಪಾಡಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ತಿರುಚೆಂಗೋಡಿನಿಂದ ಬರುತ್ತಿದ್ದ ಇನ್ನೊಂದು ಬಸ್ ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿವೆ. ಎರಡು ಖಾಸಗಿ ಬಸ್ಗಳಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಡಿಕ್ಕಿಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#WATCH | Tamil Nadu: Two private buses collided head-on with each other in Salem district; several reported to be injured. Further details awaited.
— ANI (@ANI) May 18, 2022
(Source Unverified) pic.twitter.com/8FAJ0KRizk
ವೈರಲ್ ಆಗಿರುವ ವಿಡಿಯೋದಲ್ಲಿ, ಡಿಕ್ಕಿ ಹೊಡೆದ ನಂತರ ಬಸ್ಸಿನಲ್ಲಿ ಕುಳಿತಿದ್ದ ಚಾಲಕ ಡ್ರೈವಿಂಗ್ ಸೀಟ್ನಿಂದ ಹಾರಿ ಬಿಡುವುದನ್ನು ಮತ್ತು ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಇನ್ನೊಬ್ಬ ವ್ಯಕ್ತಿ ವಾಹನದ ಮುಂಭಾಗದ ಗಾಜಿಗೆ ತಾಗುವುದನ್ನು ಕಾಣಬಹುದು. ಈ ಡಿಕ್ಕಿಯ ಪರಿಣಾಮ ವಾಹನಕ್ಕೆ ತೀವ್ರ ಹಾನಿಯಾಗಿದೆ.
ಇತರ ಪ್ರಯಾಣಿಕರು ಕೂಡ ಆಘಾತಕ್ಕೊಳಗಾಗಿದ್ದು, ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸೇಲಂ ಮತ್ತು ಎಡಪ್ಪಾಡಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.