ಕೃಷ್ಣ ಜನ್ಮಭೂಮಿ ಪ್ರಕರಣ: ಮಸೀದಿ ತೆರವು ಕೋರಿ ಅರ್ಜಿ ಸಲ್ಲಿಸಲು ಉತ್ತರ ಪ್ರದೇಶ ಕೋರ್ಟ್ ಅನುಮತಿ
ಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ತೆಗೆದು ಹಾಕುವಂತೆ ಕೋರಿ ಮನವಿ ಸಲ್ಲಿಸಲು ಉತ್ತರ ಪ್ರದೇಶದ ಸಿವಿಲ್ ನ್ಯಾಯಾಲಯವು ಅನುಮತಿ ನೀಡಿದೆ.
Published: 19th May 2022 02:52 PM | Last Updated: 19th May 2022 02:56 PM | A+A A-

ಶಾಹಿ ಈದ್ಗ ಮಸೀದಿ
ಲಖನೌ: ಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ತೆಗೆದು ಹಾಕುವಂತೆ ಕೋರಿ ಮನವಿ ಸಲ್ಲಿಸಲು ಉತ್ತರ ಪ್ರದೇಶದ ಸಿವಿಲ್ ನ್ಯಾಯಾಲಯವು ಅನುಮತಿ ನೀಡಿದೆ.
17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿ ಹಿಂದೂ ಸಂಘಟನೆಗಳು ಮಾಡಿದ ಮೊಕದ್ದಮೆಗಳಲ್ಲಿ ಒಂದಾಗಿದ್ದು, ಮಸೀದಿಯನ್ನು ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಮೊಕದ್ದಮೆಯಲ್ಲಿ ಹೇಳಿಕೊಳ್ಳಲಾಗಿದೆ.
ಶಾಹಿ ಈದ್ಗಾ ಮಸೀದಿಯನ್ನು 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೃಷ್ಣ ಜನ್ಮಭೂಮಿಯ ಬಳಿ ನಿರ್ಮಿಸಲಾಗಿದೆ ಎಂದು ಅರ್ಜಿಗಳು ಹೇಳುತ್ತವೆ. ಲಖನೌ ನಿವಾಸಿ ರಂಜನಾ ಅಗ್ನಿಹೋತ್ರಿ ಅವರು ಕತ್ರಾ ಕೇಶವ್ ದೇವ್ ದೇವಸ್ಥಾನದ 'ಶಿಶು ಭಗವಾನ್ ಕೃಷ್ಣನ ಮುಂದಿನ ಸ್ನೇಹಿತ' ಎಂದು ಮೊಕದ್ದಮೆ ಹೂಡಿದ್ದರು.
ಇದನ್ನೂ ಓದಿ: ಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ತೆರವು ಅರ್ಜಿಯನ್ನು ಮತ್ತೆ ಕೈಗೆತ್ತಿಕೊಂಡ ಹೈಕೋರ್ಟ್!
ಮೊಕದ್ದಮೆಯನ್ನು ವಜಾಗೊಳಿಸಿದ ಸಿವಿಲ್ ನ್ಯಾಯಾಲಯದ ಹಿಂದಿನ ಆದೇಶವನ್ನು ಮರುಪರಿಶೀಲನಾ ಅರ್ಜಿಯಲ್ಲಿ ಮಥುರಾ ನ್ಯಾಯಾಲಯದ ಮುಂದೆ ಪ್ರಶ್ನಿಸಲಾಯಿತು. ಅರ್ಹತೆಯ ಮೇರೆಗೆ ವಿಚಾರಣೆ ನಡೆಸಲು ಸಿವಿಲ್ ನ್ಯಾಯಾಲಯಕ್ಕೆ ಪ್ರಕರಣವನ್ನು ವಾಪಸ್ ಕಳುಹಿಸಲಾಗಿದೆ.