social_icon

ಬಿಜೆಪಿ ಅಥವಾ ಎಎಪಿ ಸೇರುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಹಾರ್ದಿಕ್ ಪಟೇಲ್

ಗುಜರಾತ್‌ನಲ್ಲಿ ಆಡಳಿತಾರೂಢ ಬಿಜೆಪಿಯಾಗಲಿ ಅಥವಾ ಆಮ್ ಆದ್ಮಿ ಪಕ್ಷ ಸೇರಿದಂತೆ ಬೇರೆ ಯಾವುದೇ ಪಕ್ಷಕ್ಕೆ ಸೇರುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಮಾರನೇ ದಿನ...

Published: 19th May 2022 03:19 PM  |   Last Updated: 19th May 2022 03:19 PM   |  A+A-


Hardik Patel has Sardar Patel's DNA: Cong leader; BJP criticises remarks

ಹಾರ್ದಿಕ್ ಪಟೇಲ್

PTI

ಅಹಮದಾಬಾದ್: ಗುಜರಾತ್‌ನಲ್ಲಿ ಆಡಳಿತಾರೂಢ ಬಿಜೆಪಿಯಾಗಲಿ ಅಥವಾ ಆಮ್ ಆದ್ಮಿ ಪಕ್ಷ ಸೇರಿದಂತೆ ಬೇರೆ ಯಾವುದೇ ಪಕ್ಷಕ್ಕೆ ಸೇರುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಮಾರನೇ ದಿನ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಅವರು ಗುರುವಾರ ಹೇಳಿದ್ದಾರೆ.

ಇಂದು ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಾಟಿದಾರ್ ನಾಯಕ, ಕಾಂಗ್ರೆಸ್ ಅತಿದೊಡ್ಡ ಜಾತಿವಾದಿ ಪಕ್ಷವಾಗಿದೆ ಮತ್ತು ರಾಜ್ಯ ಘಟಕದ ಕಾರ್ಯಾಧ್ಯಕ್ಷರಾಗಿದ್ದ ತನಗೆ ಯಾವುದೇ ಕರ್ತವ್ಯಗಳನ್ನು ನಿಯೋಜಿಸಿಲ್ಲ ಎಂದು ಆರೋಪಿಸಿದರು.

ಇದನ್ನು ಓದಿ: ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ

ಕಾರ್ಯಾಧ್ಯಕ್ಷರ ಜವಾಬ್ದಾರಿ ಕೇವಲ ಕಾಗದದ ಮೇಲಿದೆಯೇ ಹೊರತು ತನಗೆ ಎರಡು ವರ್ಷಗಳಿಂದ ಯಾವುದೇ ಜವಾಬ್ದಾರಿ ನೀಡಿಲ್ಲ. ರಾಹುಲ್ ಗಾಂಧಿ ಗುಜರಾತ್‌ಗೆ ಭೇಟಿ ನೀಡಿದಾಗ ರಾಜ್ಯದ ಒಂದೇ ಒಂದು ವಿಷಯದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಪಟೇಲ್ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಇಲ್ಲಿಗೆ ಬಂದಾಗ ಯಾವ ಚಿಕನ್ ಸ್ಯಾಂಡ್ ವಿಚ್ ಕೊಡಬೇಕು, ಯಾವ ಡಯಟ್ ಕೋಕ್ ಕೊಡಬೇಕು ಎಂದು ಕಾಂಗ್ರೆಸ್ ನಾಯಕರು ಚರ್ಚಿಸುತ್ತಾರೆ. ಜಾತಿವಾದಿ ರಾಜಕಾರಣ ಬಿಟ್ಟರೆ ಬೇರೇನೂ ನಡೆಯುವುದಿಲ್ಲ. ಇದಲ್ಲದೆ, ಕಾಂಗ್ರೆಸ್ ಪಕ್ಷದ ನಾಯಕತ್ವವು ಒಂದು ಕುಟುಂಬದ ಸುತ್ತಲೂ ನಡೆಯುತ್ತಿದೆ ಎಂದು ಹೇಳಿದರು.

ಇದೇ ವೇಳೆ ನೀವು ಬಿಜೆಪಿ ಅಥವಾ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಸೇರುತ್ತೀರಾ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಪಟೇಲ್, "ಬಿಜೆಪಿ ಅಥವಾ ಎಎಪಿ ಸೇರಿದಂತೆ ಇತರೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವ ಬಗ್ಗೆ ನಾನು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ" ಎಂದು ಹೇಳಿದರು.


Stay up to date on all the latest ದೇಶ news
Poll
Rajasthan Chief Minister Ashok Gehlot and Congress leader Sachin Pilot ( File Photo | PTI)

ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ಭಿನ್ನಾಭಿಪ್ರಾಯವು ಈ ವರ್ಷ ರಾಜಸ್ಥಾನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಾನಿ ಮಾಡುತ್ತದೆಯೇ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Indian

    See bro who's having family means wife son father mother what a common man or a person we do he too how he becat GOD. see he use take food he use wearing clothes. He use sleep. As a normal people person. Site for a whole thing for some time is it possible a person became a GOD.
    8 months ago reply
flipboard facebook twitter whatsapp