
ಸಾಂದರ್ಭಿಕ ಚಿತ್ರ
ತಿರುವನಂತಪುರಂ: ದಕ್ಷಿಣ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೇರಳದ ಸುತ್ತಮುತ್ತಲಿನ ಒಂಬತ್ತು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಯೆಲ್ಲೋ ಅಲರ್ಟ್ ಘೋಷಿಸಿದೆ.
ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಇದನ್ನು ಓದಿ: ಸತತ ಧಾರಾಕಾರ ಮಳೆಗೆ ಬೆಂಗಳೂರು ಕುಲು-ಮನಾಲಿಗಿಂತಲೂ ಕೂಲ್.. ಕೂಲ್...
ಯೆಲ್ಲೋ ಅಲರ್ಟ್ ಎಂದರೆ 6 ರಿಂದ 11 ಸೆಂ.ಮೀ ನಡುವೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ ಹವಾಮಾನ ಇಲಾಖೆ ಈ ಘೋಷಣೆ ಮಾಡುತ್ತದೆ. ಮೇ 20 ರಿಂದ ಮೇ 22 ರವರೆಗೆ ಕೇರಳದ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ(24 ಗಂಟೆಗಳಲ್ಲಿ 7-11 ಸೆಂ) ಮಳೆಯಾಗುವ ಸಾಧ್ಯತೆಯಿದೆ” ಎಂದು ಐಎಂಡಿ ಹೇಳಿದೆ.
ಇಂದಿನಿಂದ ಎರಡು ದಿನಗಳ ಕಾಲ ಕೇರಳ ಮತ್ತು ಲಕ್ಷದ್ವೀಪದ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ರಾಜ್ಯದ ಕೆಲವು ಸ್ಥಳಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.