ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ; ಗ್ಯಾಸ್ ಸಿಲಿಂಡರ್ ಮೇಲೆ 200 ರೂ ಸಬ್ಸಿಡಿ ಲಭ್ಯ, ಷರತ್ತು ಅನ್ವಯ

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೆಚ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವ ಕೇಂದ್ರ ಸರ್ಕಾರ ಇದರ ನಡುವೆಯೇ ಗ್ಯಾಸ್ ಸಿಲಿಂಡರ್ ಮೇಲೆ ಕೂಡ ಘೋಷಣೆ ಮಾಡಿದೆ.

Published: 21st May 2022 07:33 PM  |   Last Updated: 23rd May 2022 01:34 PM   |  A+A-


Non-subsidised LPG gas price cut by Rs 62.50 per cylinder from today

ಸಾಂದರ್ಭಿಕ ಚಿತ್ರ

PTI

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೆಚ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವ ಕೇಂದ್ರ ಸರ್ಕಾರ ಇದರ ನಡುವೆಯೇ ಗ್ಯಾಸ್ ಸಿಲಿಂಡರ್ ಮೇಲೆ ಕೂಡ ಘೋಷಣೆ ಮಾಡಿದೆ.

ಹೌದು.. ಶನಿವಾರ ಗ್ಯಾಸ್ ಸಿಲಿಂಡರ್ ಬೆಲೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶನಿವಾರ ಮಹತ್ವದ ಘೋಷಣೆಗಳನ್ನು ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದರೆ, ಗ್ಯಾಸ್ ಸಿಲಿಂಡರ್‌ಗಳ ಮೇಲೆ ರೂ 200 ಸಬ್ಸಿಡಿಯನ್ನು ಸಹ ಘೋಷಿಸಿದೆ. 

ಇದನ್ನೂ ಓದಿ: ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ; ಪೆಟ್ರೋಲ್ ಬೆಲೆ 9.5 ರೂ, ಡೀಸೆಲ್ ದರ 7 ರೂ. ಇಳಿಕೆ

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಈ ಸಬ್ಸಿಡಿ ಲಭ್ಯವಾಗಲಿದ್ದು, ಆದರೆ ಈ ಸಬ್ಸಿಡಿ ವಿಚಾರಕ್ಕೆ ಷರತ್ತು ಕೂಡ ಹಾಕಲಾಗಿದೆ. ಈ ಸಬ್ಸಿಡಿಯನ್ನು ವಾರ್ಷಿಕವಾಗಿ 12 ಸಿಲಿಂಡರ್‌ಗಳಿಗೆ ಮಾತ್ರ ನೀಡಲಾಗುವುದು ಎಂದು ವಿತ್ತ ಸಚಿವಾಲಯ ಮಾಹಿತಿ ನೀಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, 'ಪ್ರಧಾನಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಈ ವರ್ಷ ಪ್ರತಿ ಗ್ಯಾಸ್ ಸಿಲಿಂಡರ್‌ಗೆ (12 ಸಿಲಿಂಡರ್‌ಗಳವರೆಗೆ) 200 ರೂಪಾಯಿ ಸಬ್ಸಿಡಿ ನೀಡಲಿದ್ದಾರೆ. ಇದು ನಮ್ಮ ತಾಯಿ ಮತ್ತು ಸಹೋದರಿಯರಿಗೆ ಸಹಾಯ ಮಾಡುತ್ತದೆ. ಇದು ಸುಮಾರು 6100 ಕೋಟಿ ವಾರ್ಷಿಕ ಆದಾಯದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.
 


Stay up to date on all the latest ರಾಷ್ಟ್ರೀಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • lokesha B M

    you can't given subsidy common connection for LPG? only Ujjvala what sir? other common people you can't see
    1 month ago reply
flipboard facebook twitter whatsapp