ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಟ್ರಕ್'ಗೆ ಕಾರು ಡಿಕ್ಕಿ, 8 ಮಂದಿ ದುರ್ಮರಣ
ಉತ್ತರಪ್ರದೇಶದ ಸಿದ್ಧಾರ್ಥ ನಗರದ ನೌಗಢ್-ಬನ್ಸಿ ರಸ್ತೆಯಲ್ಲಿ ನಿಂತಿದ್ದ ಟ್ರಕ್'ಗೆ ಎಸ್‌ಯುವಿ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ 8 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
Published: 22nd May 2022 10:23 AM | Last Updated: 22nd May 2022 10:23 AM | A+A A-

ಸಂಗ್ರಹ ಚಿತ್ರ
ಸಿದ್ಧಾರ್ಥನಗರ (ಉತ್ತರಪ್ರದೇಶ): ಉತ್ತರಪ್ರದೇಶದ ಸಿದ್ಧಾರ್ಥ ನಗರದ ನೌಗಢ್-ಬನ್ಸಿ ರಸ್ತೆಯಲ್ಲಿ ನಿಂತಿದ್ದ ಟ್ರಕ್'ಗೆ ಎಸ್‌ಯುವಿ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ 8 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ವಿವಾಹ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದ ಕುಟುಂಬಸ್ಥರು ಕಾರಿನಲ್ಲಿ ಬರುತ್ತಿದ್ದು, ಈ ವೇಳೆ ರಸ್ತೆಯಲ್ಲಿ ನಿಂತಿದ್ದ ಟ್ರಕ್'ಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಘಟನೆಯಲ್ಲಿ 8 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಗೋರಖ್ ಪುರದ ಬಿಆರ್'ಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರನ್ನು ಅತೀ ವೇಗದಲ್ಲಿ ಚಲಿಸುತ್ತಿದ್ದದ್ದೇ ಘಟನೆಗೆ ಕಾರಣವೆಂದು ಹೇಳಲಾಗುತ್ತಿದೆ.
ಘಟನೆಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಈ ನಡುವೆ ಘಟನೆಗೆ ಪ್ರಧಾನಿ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತವು ಬಹಳ ನೋವು ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ದುಃಖ ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ. ಎಲ್ಲಾ ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಹಾರೇಸುತ್ತೇನೆಂದು ಹೇಳಿದ್ದಾರೆ. ಅಲ್ಲದೆ, ಮೃತರಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.