ಮಹಾರಾಷ್ಟ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಕೂಡಾ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತ ಮಾಡಿದೆ.
Published: 22nd May 2022 08:38 PM | Last Updated: 22nd May 2022 08:39 PM | A+A A-

ಸಾಂದರ್ಭಿಕ ಚಿತ್ರ
ಮುಂಬೈ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಕೂಡಾ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತ ಮಾಡಿದೆ.
ಇದನ್ನೂ ಓದಿ: ಕೇರಳ, ಒಡಿಶಾ, ರಾಜಸ್ಥಾನದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವುದರಿಂದ ಶಿವಸೇನಾ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಪೆಟ್ರೋಲ್ ಮೇಲೆ ಲೀಟರ್ ಗೆ 2. 08 ರೂ ಮತ್ತು ಡೀಸೆಲ್ ಗೆ 1.44 ರೂನಷ್ಟು ವ್ಯಾಟ್ ಕಡಿತ ಮಾಡಿದೆ. ಸರ್ಕಾರದ ಈ ನಿರ್ಧಾರದಿಂದ ವಾರ್ಷಿಕವಾಗಿ ರೂ. 2,500 ಕೋಟಿಯಷ್ಟು ಹೊರೆಯಾಗಲಿದೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿತ ನಂತರ ಪೆಟ್ರೋಲ್ ನಿಂದ ಪ್ರತಿ ತಿಂಗಳು ರೂ. 80 ಕೋಟಿ ಹಾಗೂ ಡೀಸೆಲ್ ನಿಂದ 125 ಕೋಟಿ ರೂ. ಕಡಿಮೆಯಾಗಲಿದೆ.