ನಿಮಗೆ ರಾಮನ ಮೇಲೆ ಯಾಕೆ ಇಷ್ಟೊಂದು ದ್ವೇಷ?: ಕಾಂಗ್ರೆಸ್ ವಿರುದ್ಧ ಹಾರ್ದಿಕ್ ಪಟೇಲ್ ತೀವ್ರ ವಾಗ್ದಾಳಿ
ಕಾಂಗ್ರೆಸ್ ಜನರ ಭಾವನೆಗಳಿಗೆ ಮತ್ತು ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಭರತ್ ಸಿಂಗ್ ಸೋಲಂಕಿ ಅವರು ವಿರುದ್ಧ ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್...
Published: 24th May 2022 08:39 PM | Last Updated: 25th May 2022 01:15 PM | A+A A-

ಹಾರ್ದಿಕ್ ಪಟೇಲ್
ನವದೆಹಲಿ: ಕಾಂಗ್ರೆಸ್ ಜನರ ಭಾವನೆಗಳಿಗೆ ಮತ್ತು ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಭರತ್ ಸಿಂಗ್ ಸೋಲಂಕಿ ಅವರು ವಿರುದ್ಧ ಪಕ್ಷದ ಮಾಜಿ ನಾಯಕ ಹಾರ್ದಿಕ್ ಪಟೇಲ್ ಅವರು ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಕೇಂದ್ರ ಸಚಿವ ಮತ್ತು ಗುಜರಾತ್ ಕಾಂಗ್ರೆಸ್ ನಾಯಕರೊಬ್ಬರು ರಾಮಮಂದಿರಕ್ಕಾಗಿ ಇಟ್ಟಿರುವ ಇಟ್ಟಿಗೆಗಳ ಮೇಲೆ ನಾಯಿಗಳು ಮೂತ್ರ ವಿಸರ್ಜಿಸುತ್ತವೆ ಎಂದು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತದೆ, ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತದೆ ಎಂದು ನಾನು ಈ ಮೊದಲೇ ಹೇಳಿದ್ದೆ ಎಂದು ಇತ್ತೀಚಿಗಷ್ಟೇ ಕಾಂಗ್ರೆಸ್ ತೊರೆದ ಹಾರ್ದಿಕ್ ಪಟೇಲ್ ದೂರಿದ್ದಾರೆ.
ಇದನ್ನು ಓದಿ: ಬಿಜೆಪಿ ಅಥವಾ ಎಎಪಿ ಸೇರುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಹಾರ್ದಿಕ್ ಪಟೇಲ್
ಕಾಂಗ್ರೆಸ್ ಮತ್ತು ಪಕ್ಷದ ನಾಯಕರಿಗೆ ಭಗವಾನ್ ಶ್ರೀರಾಮನ ಮೇಲೆ ಯಾಕೆ ಇಷ್ಟೊಂದು ದ್ವೇಷ? ಶತಮಾನಗಳ ನಂತರ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗುತ್ತಿದೆ. ಆದರೂ ಕಾಂಗ್ರೆಸ್ ನಾಯಕರು ಭಗವಾನ್ ಶ್ರೀರಾಮನ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ ಎಂದು ಟೀಕಿಸಿದ್ದಾರೆ.