ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಪಾಕ್ ಮೂಲದ 3 ಉಗ್ರರು ಹತ, ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನ ಮೂಲದ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
Published: 25th May 2022 11:42 AM | Last Updated: 25th May 2022 12:33 PM | A+A A-

ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನ ಮೂಲದ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಬಾರಾಮುಲ್ಲಾದ ಕ್ರೀರಿ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿಗಳು ತಿಳಿದುಬಂದ ಹಿನ್ನೆಲೆಯಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.
ಇದನ್ನೂ ಓದಿ: ಪುಲ್ವಾಮಾದಲ್ಲಿ ಜೆಇಎಂ ಭಯೋತ್ಪಾದನಾ ಘಟಕ ಭೇದಿಸಿದ ಭಾರತೀಯ ಸೇನೆ: 8 ಉಗ್ರಗಾಮಿ ಸಹಚರರ ಬಂಧನ!
ಸೇನಾಪಡೆ ಸ್ಥಳದತ್ತ ಧಾವಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಯೋಧ ಹುತಾತ್ಮನಾಗಿದ್ದಾನೆ. ಕಾರ್ಯಾಚರಣೆ ಮೂವರು ಪಾಕಿಸ್ತಾನ ಮೂಲದ ಉಗ್ರರನ್ನೂ ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.