ಜಪಾನ್‌ ಪ್ರವಾಸ ಮುಕ್ತಾಯ: ಭಾರತಕ್ಕೆ ಮರಳಿದ ಪ್ರಧಾನಿ ಮೋದಿ

ಕ್ವಾಡ್ ರಾಷ್ಟ್ರಗಳ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಕಾಲ ಜಪಾನ್ ಪ್ರವಾಸ ಕೈಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತವರಿಗೆ ವಾಪಸ್ಸಾಗಿದ್ದಾರೆ.

Published: 25th May 2022 09:51 AM  |   Last Updated: 25th May 2022 12:29 PM   |  A+A-


Pm modi in Newdelhi

ರಾಷ್ಟ್ರ ರಾಜಧಾನಿ ನವದೆಹಲಿಗೆ ಆಗಮಿಸಿದ ಪ್ರಧಾನಿ ಮೋದಿ.

ANI

ನವದೆಹಲಿ: ಕ್ವಾಡ್ ರಾಷ್ಟ್ರಗಳ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಕಾಲ ಜಪಾನ್ ಪ್ರವಾಸ ಕೈಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತವರಿಗೆ ವಾಪಸ್ಸಾಗಿದ್ದಾರೆ.

ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಮೋದಿ ಟೋಕಿಯೋಗೆ 2 ದಿನಗಳ ಕಾಲ ಭೇಟಿ ನೀಡಿದ್ದರು. ಕಳೆದ 8 ವರ್ಷಗಳಲ್ಲಿ ಜಪಾನ್‌ಗೆ 5ನೇ ಬಾರಿ ಭೇಟಿ ನೀಡಿರುವ ಮೋದಿಗೆ ಆತ್ಮೀಯ ಸ್ವಾಗತ ನೀಡಲಾಗಿತ್ತು.

ನಿನ್ನೆ ಟೋಕಿಯೋದಲ್ಲಿ ನಡೆದ ಕ್ವಾಡ್ ಶೃಂಗದಲ್ಲಿ ಮೋದಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಜಪಾನ್‌ ಪ್ರಧಾನಿ ಫ್ಯೂಮಿಯೊ ಕಿಷಿದಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಹಾಗೂ ಆಸ್ಟ್ರೇಲಿಯಾದ ನಿಯೋಜಿತ ಅಂಥೋನಿ ಅಲ್ಬನೀಸ್ ಜತೆ ಮಾತುಕತೆ ನಡೆಸಿದ್ದರು.

ಈ ಕ್ವಾಡ್ ಶೃಂಗಸಭೆಯಲ್ಲಿ, ಪ್ರಧಾನಿ ಮೋದಿ ಅವರು ಯುದ್ಧವನ್ನು ನಿಲ್ಲಿಸುವುದು, ಸಂವಾದ ಮತ್ತು ರಾಜತಾಂತ್ರಿಕತೆಯ ಪುನರಾರಂಭದ ಅಗತ್ಯತೆಯ ಕುರಿತು ಭಾರತದ ಸ್ಥಿರ ಮತ್ತು ತಾತ್ವಿಕ ನಿಲುವನ್ನು ಎತ್ತಿ ತೋರಿಸಿದರು.

ಇದನ್ನೂ ಓದಿ: ಉಕ್ರೇನ್‌ ಮೇಲೆ ರಷ್ಯಾ ಅಕ್ರಮಣ ವಿಶ್ವಸಂಸ್ಥೆ ಚಾರ್ಟರ್ ಅಂಶಗಳಿಗೆ ವಿರುದ್ಧವಾದದ್ದು: ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ!!

ಶೃಂಗಸಭೆಯ ಸಮಯದಲ್ಲಿ, ನಾಯಕರು ಮುಕ್ತ ಮತ್ತು ಎಲ್ಲರನ್ನೂ ಒಳಗೊಂಡ ಇಂಡೋ-ಪೆಸಿಫಿಕ್‌ಗೆ ತಮ್ಮ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸಿದರು ಮತ್ತು ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಮತ್ತು ವಿವಾದಗಳ ಶಾಂತಿಯುತ ಪರಿಹಾರದ ತತ್ವಗಳನ್ನು ಎತ್ತಿಹಿಡಿಯುವ ಪ್ರಾಮುಖ್ಯತೆಯನ್ನು ಪುನರುಚ್ಚರಿಸಿದರು.

ಇಂಡೋ-ಪೆಸಿಫಿಕ್‌ನಲ್ಲಿನ ಬೆಳವಣಿಗೆಗಳು ಮತ್ತು ಯುರೋಪಿನ ಸಂಘರ್ಷದ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡರು. ಕ್ವಾಡ್ ಶೃಂಗಸಭೆಯ ಹೊರತಾಗಿ, ಪ್ರಧಾನಿ ಮಂಗಳವಾರ ಯುಎಸ್ ಅಧ್ಯಕ್ಷ ಜೋ ಬಿಡನ್ ಮತ್ತು ಆಸ್ಟ್ರೇಲಿಯಾದ ಹೊಸ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು.

ಜಪಾನ್‌ಗೆ ಭೇಟಿ ನೀಡಿದ ಮೊದಲ ದಿನವಾದ ಸೋಮವಾರ, ಪ್ರಧಾನಿ ಅವರು ಸರಣಿ ಕಾರ್ಯಕ್ರಮಗಳನ್ನು ಹೊಂದಿದ್ದರು. ಅವರು ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್ ಆರ್ಥಿಕ ಚೌಕಟ್ಟನ್ನು ಪ್ರಾರಂಭಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು ಮತ್ತು ಟೋಕಿಯೊದಲ್ಲಿ ವ್ಯಾಪಾರ ದುಂಡುಮೇಜಿನ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಿದರು.


Stay up to date on all the latest ರಾಷ್ಟ್ರೀಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp