'ನ್ಯಾಯಾಂಗ ತನ್ನ ಪಾರದರ್ಶಕತೆಯನ್ನು ಸಾಬೀತುಪಡಿಸಿದೆ': ಯಾಸಿನ್ ಮಲಿಕ್ಗೆ ಜೀವಾವಧಿ ಶಿಕ್ಷೆ ಸ್ವಾಗತಿಸಿದ ಅಜ್ಮೀರ್ ದರ್ಗಾ ಮುಖ್ಯಸ್ಥ
ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಕೋರ್ಟ್ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ಗೆ ಜೀವಾವಧಿ ಶಿಕ್ಷೆ ನೀಡಿರುವುದನ್ನು ಸ್ವಾಗತಿಸಿದ ಅಜ್ಮೀರ್ ದರ್ಗಾದ ದಿವಾನ್ ಸೈಯದ್ ಜೈನುಲ್ ಅಬೇದಿನ್...
Published: 26th May 2022 04:24 PM | Last Updated: 26th May 2022 04:24 PM | A+A A-

ಸೈಯದ್ ಜೈನುಲ್ ಅಬೇದಿನ್ ಅಲಿ ಖಾನ್
ಜೈಪುರ: ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಕೋರ್ಟ್ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ಗೆ ಜೀವಾವಧಿ ಶಿಕ್ಷೆ ನೀಡಿರುವುದನ್ನು ಸ್ವಾಗತಿಸಿದ ಅಜ್ಮೀರ್ ದರ್ಗಾದ ದಿವಾನ್ ಸೈಯದ್ ಜೈನುಲ್ ಅಬೇದಿನ್ ಅಲಿ ಖಾನ್ ಅವರು, ದೇಶದ ನ್ಯಾಯಾಂಗ ವ್ಯವಸ್ಥೆಯು ತನ್ನ ವಿವೇಕ, ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಗುರುವಾರ ಹೇಳಿದ್ದಾರೆ.
ಈ ಅಪರಾಧಗಳು "ಭಾರತದ ಕಲ್ಪನೆಯ ಹೃದಯ" ಹೊಡೆಯುವ ಉದ್ದೇಶವನ್ನು ಹೊಂದಿದ್ದವು ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ಭಾರತ ಒಕ್ಕೂಟದಿಂದ ಬಲವಂತವಾಗಿ ಪ್ರತ್ಯೇಕಿಸುವ ಉದ್ದೇಶವನ್ನು ಹೊಂದಿವೆ ಎಂದು ಅಜ್ಮೀರ್ ದರ್ಗಾ ಮುಖ್ಯಸ್ಥರು ಹೇಳಿದ್ದಾರೆ.
ಇದನ್ನು ಓದಿ: ಉಗ್ರರಿಗೆ ಆರ್ಥಿಕ ನೆರವು: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ಗೆ ಜೀವಾವಧಿ ಶಿಕ್ಷೆ
ಸಂಪೂರ್ಣ ನ್ಯಾಯಾಂಗ ಪ್ರಕ್ರಿಯೆಯ ನಂತರ ಯಾಸಿನ್ ಮಲಿಕ್ ಅವರಿಗೆ ಶಿಕ್ಷೆ ನೀಡಲಾಗಿದೆ. ಭಾರತದ ನ್ಯಾಯಾಂಗ ವ್ಯವಸ್ಥೆಯು ತನ್ನ ವಿವೇಕ, ಸ್ವಾತಂತ್ರ್ಯ ಮತ್ತು ಪಾರದರ್ಶಕತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಇದನ್ನು ಇಡೀ ಜಗತ್ತು ಸದಾ ಪ್ರಶಂಸಿಸುತ್ತದೆ" ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ವಿಶ್ವದ ಮುಂದೆ ಪಾಕಿಸ್ತಾನ ನಿಜವಾದ ಬಣ್ಣ ಈಗ ಬಯಲಾಗಿದೆ. ಭಾರತದಲ್ಲಿ ಭಯೋತ್ಪಾದನೆಯನ್ನು ಪ್ರಚೋದಿಸುವ ಮೂಲಕ ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆಗಳನ್ನು ನಡೆಸಲು ಅಮಾಯಕ ಕಾಶ್ಮೀರಿಗಳ ಕೈಯಿಂದ ಪುಸ್ತಕಗಳನ್ನು ಕಸಿದುಕೊಂಡು ಅವರ ಕೈಗೆ ಬಂದೂಕುಗಳನ್ನು ನೀಡುತ್ತಿದೆ. ಯಾಸಿನ್ ಮಲಿಕ್ ಅವರಂತಹವರ ಮೂಲಕ ಭಾರತದಲ್ಲಿ ಭಯೋತ್ಪಾದನೆಗೆ ಹೇಗೆ ಆರ್ಥಿಕ ನೆರವು ನೀಡುತ್ತಿದೆ ಎಂಬುದು ಬಹಿರಂಗವಾಗಿದೆ’ ಎಂದು ಅವರು ಹೇಳಿದ್ದಾರೆ.