ಪಶ್ಚಿಮ ಬಂಗಾಳ: 6 ವರ್ಷದ ಮಗನನ್ನು ಕೊಳದಲ್ಲಿ ಮುಳುಗಿಸಿ ಕೊಂದ ಪಾಪಿ ತಂದೆ!
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಆರು ವರ್ಷದ ಮಗನನ್ನು ಕೊಳದಲ್ಲಿ ಮುಳುಗಿಸಿ ಕೊಂದಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Published: 28th May 2022 04:55 PM | Last Updated: 28th May 2022 07:31 PM | A+A A-

ಸಾಂದರ್ಭಿಕ ಚಿತ್ರ
ಬರುಪುರ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಆರು ವರ್ಷದ ಮಗನನ್ನು ಕೊಳದಲ್ಲಿ ಮುಳುಗಿಸಿ ಕೊಂದಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಗೋಸಾಬಾದ ಪಠನ್ಖಾಲಿ ದ್ವೀಪದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಬೆಳಗ್ಗೆ ಮಗ ನಾಪತ್ತೆಯಾಗಿದ್ದು, ಕುಟುಂಬಸ್ಥರು ಆತನಿಗಾಗಿ ಹುಡುಕಾಟ ಆರಂಭಿಸಿದ್ದರು. ನಂತರ ಆತನ ಶವ ಕೊಳದ ಬಳಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಣೆಯಾದ ಮಗನನ್ನು ಹುಡುಕಲು ತಂದೆ ಹಿಂಜರಿಯುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಆತನನ್ನು ಪ್ರಶ್ನಿಸಿದಾಗ ಅಸಮಂಜಸವಾಗಿದೆ ಉತ್ತರಿಸಿದ್ದರು. ಕೆಲ ಸಮಯದ ನಂತರ ಆತ ಕೂಡ ನಾಪತ್ತೆಯಾಗಿದ್ದರು.
ನಂತರ ಆತನ ಪತ್ತೆಗಾಗಿ ಜಾಲ ಬೀಸಿದ್ದು ಶನಿವಾರ ಮುಂಜಾನೆ ಭಂಗೋರ್ನಿಂದ ಬಂಧಿಸಲಾಯಿತು. ಈ ವೇಳೆ ತಮ್ಮ ಮಗನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಡ-ಹೆಂಡತಿ ನಡುವೆ ಸಂಬಂಧ ಚೆನ್ನಾಗಿರಲಿಲ್ಲ. ಆಕೆ ಬೇರೆಡೆ ವಾಸಿಸುತ್ತಿದ್ದಳು. ತಂದೆ ಮಗನೊಂದಿಗೆ ವಾಸಿಸುತ್ತಿದ್ದನು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.