ವಿಶೇಷ ಚೇತನ ಮಗುವಿಗೆ ವಿಮಾನ ಹತ್ತಲು ಬಿಡದ ಇಂಡಿಗೋ ಸಂಸ್ಥೆಗೆ 5 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ
ರಾಂಚಿ ವಿಮಾನ ನಿಲ್ದಾಣದಲ್ಲಿ ಗಾಬರಿಯ ಸ್ಥಿತಿಯಲ್ಲಿದ್ದ ವಿಶೇಷ ಚೇತನ ಮಗುವನ್ನು ವಿಮಾನ ಹತ್ತುವುದನ್ನು ನಿರ್ಬಂಧಿಸಿದ್ದ ಇಂಡಿಗೋ ವಿಮಾನ ಸಂಸ್ಥೆಗೆ ಡಿಜಿಸಿಎ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
Published: 28th May 2022 04:15 PM | Last Updated: 28th May 2022 07:26 PM | A+A A-

ಇಂಡಿಗೋ ವಿಮಾನ
ನವದೆಹಲಿ: ರಾಂಚಿ ವಿಮಾನ ನಿಲ್ದಾಣದಲ್ಲಿ ಗಾಬರಿಯ ಸ್ಥಿತಿಯಲ್ಲಿದ್ದ ವಿಶೇಷ ಚೇತನ ಮಗುವನ್ನು ವಿಮಾನ ಹತ್ತುವುದನ್ನು ನಿರ್ಬಂಧಿಸಿದ್ದ ಇಂಡಿಗೋ ವಿಮಾನ ಸಂಸ್ಥೆಗೆ ಪ್ರಯಾಣಿಕ ವಿಮಾನಯಾನದ ಪ್ರಧಾನ ನಿರ್ದೇಶನಾಲಯ (ಡಿಜಿಸಿಎ) 5 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಇದನ್ನೂ ಓದಿ ವಿಶೇಷ ಚೇತನ ಮಗು ವಿಮಾನ ಹತ್ತದಂತೆ ನಿರ್ಬಂಧ: ಇಂಡಿಗೋ ವಿರುದ್ಧ ಕ್ರಮ- ಎನ್ ಸಿಪಿಸಿಆರ್
ಮೇ.07 ರಂದು ಈ ಘಟನೆ ನಡೆದಿತ್ತು. ಈ ಬಗ್ಗೆ ಮೆ.09 ರಂದು ಸ್ಪಷ್ಟನೆ ನೀಡಿದ್ದ ಇಂಡಿಗೋ ಸಂಸ್ಥೆ 'ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ, ವಿಶೇಷ ಚೇತನ ಮಗುವು ಭಯಭೀತರಾಗಿದ್ದರಿಂದ ತನ್ನ ಕುಟುಂಬದೊಂದಿಗೆ ಮೇ 7ರಂದು ವಿಮಾನವನ್ನು ಹತ್ತಲು ಸಾಧ್ಯವಾಗಲಿಲ್ಲ. ವಿಮಾನ ಸಿಬ್ಬಂದಿ ಕೊನೆಯ ಕ್ಷಣದವರೆಗೂ ಮಗು ಶಾಂತವಾಗುತ್ತದೆ ಎಂದು ಕಾದರು ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಹೇಳಿತ್ತು.
ಘಟನೆ ಬಗ್ಗೆ ತನಿಖೆ ನಡೆಸಲು ಡಿಜಿಸಿಎ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ವಿಶೇಷ ಚೇತನ ಮಗುವನ್ನು ನಿಭಾಯಿಸುವುದರಲ್ಲಿ ಇಂಡಿಗೋ ಸಿಬ್ಬಂದಿಗಳ ಕೊರತೆ ಇದ್ದು, ಪರಿಸ್ಥಿತಿಯನ್ನು ಉಲ್ಬಣಗೊಳಿಸಲಾಗಿತ್ತು ಎಂದು ಡಿಜಿಸಿಎ ಹೇಳಿತ್ತು.