ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದ ಹಿಂದಿನ ಸಂಚನ್ನು ನವಾಬ್ ಮಲಿಕ್ ಬಹಿರಂಗಪಡಿಸಿ ಅದಕ್ಕೆ ಬೆಲೆ ತೆರುತ್ತಿದ್ದಾರೆ: ಸಂಜಯ್ ರಾವತ್
ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಭಾಗಿಯಾಗಿದ್ದರು ಎನ್ನಲಾದ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದ ಹಿಂದಿನ ಪ್ರಹಸನವನ್ನು ಬಹಿರಂಗಪಡಿಸಿದ ಎನ್ಸಿಪಿ ನಾಯಕ ನವಾಬ್ ಮಲಿಕ್ ಅವರಿಗೆ ಅಭಿನಂದನೆಗಳು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.
Published: 28th May 2022 05:21 PM | Last Updated: 28th May 2022 07:32 PM | A+A A-

ನವಾಬ್ ಮಲಿಕ್
ಮುಂಬೈ: ಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಭಾಗಿಯಾಗಿದ್ದರು ಎನ್ನಲಾದ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದ ಹಿಂದಿನ ಪ್ರಹಸನವನ್ನು ಬಹಿರಂಗಪಡಿಸಿದ ಎನ್ಸಿಪಿ ನಾಯಕ ನವಾಬ್ ಮಲಿಕ್ ಅವರಿಗೆ ಅಭಿನಂದನೆಗಳು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.
ಕೊಲ್ಹಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವುತ್, ಪ್ರಕರಣದ ಹಿಂದಿನ ಪ್ರಹಸನ ಮತ್ತು ಬಿಜೆಪಿಯ ನಿಜವಾದ ಮುಖವನ್ನು ಬಹಿರಂಗಪಡಿಸಿದ್ದಕ್ಕಾಗಿ ಮಲಿಕ್ ಬೆಲೆ ತೆರುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಆರ್ಯನ್ ಖಾನ್ಗೆ 'ಡ್ರಗ್ಸ್ ಆನ್ ಕ್ರೂಸ್' ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಆರ್ಯನ್ ಖಾನ್ 22 ದಿನಗಳ ಕಾಲ ಜೈಲಿನಲ್ಲಿದ್ದರು.
ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಎನ್ ಸಿಬಿ ಚಾರ್ಜ್ಶೀಟ್ನಲ್ಲಿ ಆರ್ಯನ್ ಮತ್ತು ಇತರ ಐವರ ಹೆಸರುಗಳನ್ನು ಕೈಬಿಟ್ಟಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದ ಸಮೀರ್ ವಾಂಖೆಡೆ ವಿರುದ್ಧ ಕ್ರಮಕ್ಕೆ ಸರ್ಕಾರ ಆದೇಶಿಸಿದೆ.
ಮಹಾರಾಷ್ಟ್ರದ ಸಚಿವರಾಗಿದ್ದ ಮಲಿಕ್, ಆಗಿನ ಎನ್ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಅಭಿಯಾನವನ್ನು ಆರಂಭಿಸಿದ್ದರು, ಆರ್ಯನ್ ಖಾನ್ ತಂದೆ ಶಾರುಖ್ ಖಾನ್ನಿಂದ ಸುಲಿಗೆ ಮಾಡಲು ಅವರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ: ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣ: ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಎನ್ ಸಿಬಿಯಿಂದ ಕ್ಲೀನ್ ಚಿಟ್!
ಪರಾರಿಯಾದ ದರೋಡೆಕೋರ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಫೆಬ್ರವರಿಯಲ್ಲಿ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.
ವಾಂಖೆಡೆ ವಿರುದ್ಧ ಸೇನೆಯು ಕ್ರಮಕ್ಕೆ ಒತ್ತಾಯಿಸುತ್ತದೆಯೇ ಎಂಬ ಪ್ರಶ್ನೆಗೆ, ರಾವುತ್, ನಾವೇಕೆ ಬೇಡಿಕೆ ಇಡಬೇಕು, ಒಬ್ಬ ಯುವಕನನ್ನು ಸುಳ್ಳು ಮಾದಕ ದ್ರವ್ಯ ಪ್ರಕರಣದಲ್ಲಿ ಸಿಲುಕಿಸಿ ಅವನ ಜೀವನವನ್ನು ಹೇಗೆ ನಾಶಪಡಿಸಲು ಯತ್ನಿಸಿದರು ಎಂದು ನಾವು ಸಮೀರ್ ವಾಂಖೆಡೆಯನ್ನು ನೋಡಬೇಕೆ, ಆರ್ಯನ್ ಖಾನ್ ನನ್ನು ಒಂದು ತಿಂಗಳು ಜೈಲಿನಲ್ಲಿರಿಸಲಾಯಿತು. ಇದು ನ್ಯಾಯ ಎಂದು ಕೇಳಿದರು.