ಪುಲ್ವಾಮಾ ಎನ್ಕೌಂಟರ್: ಓರ್ವ ಉಗ್ರನ ಹೊಡೆದುರುಳಿಸಿದ ಸೇನೆ, ಮತ್ತೋರ್ವನಿಗಾಗಿ ಕಾರ್ಯಾಚರಣೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಓರ್ವ ಉಗ್ರನನ್ನು ಸೇನೆ ಹೊಡೆದುರುಳಿಸಿದೆ.
Published: 30th May 2022 11:46 AM | Last Updated: 30th May 2022 01:17 PM | A+A A-

ಸಂಗ್ರಹ ಚಿತ್ರ
ಪುಲ್ವಾಮಾ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಓರ್ವ ಉಗ್ರನನ್ನು ಸೇನೆ ಹೊಡೆದುರುಳಿಸಿದೆ.
Pulwama encounter | One more terrorist killed; two AK rifles recovered. Total 2 terrorists neutralized so far: Jammu & Kashmir Police
— ANI (@ANI) May 30, 2022
ಪುಲ್ವಾಮಾ ಜಿಲ್ಲೆಯ ಗುಂಡಿಪೋರಾ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆಯುತ್ತಿದ್ದು, ಇಬ್ಬರು ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಯೋಧರು ಕೂಡಲೇ ಪ್ರದೇಶವನ್ನು ಸುತ್ತುವರೆದಿದ್ದಾರೆ. ಈ ವೇಳೆ ಉಗ್ರರು ಸೈನಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸೇನೆ ಕೂಡ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಓರ್ವ ಉಗ್ರ ಹತನಾಗಿದ್ದಾನೆ. ಮತ್ತೋರ್ವ ಉಗ್ರನನ್ನು ಹೆಡೆ ಮುರಿ ಕಟ್ಟುವ ಕಾರ್ಯಾಚರಣೆ ಮುಂದುವರೆದಿದೆ.
#UPDATE | One terrorist killed. Operation in progress. Further details shall follow: Police
— ANI (@ANI) May 30, 2022
ನಿನ್ನೆ ಓರ್ವ ಉಗ್ರನ ಹತ್ಯೆ
ಭಾನುವಾರ ರಾತ್ರಿ ಕೂಡ ಪುಲ್ವಾಮಾ ಜಿಲ್ಲೆಯ ಗುಂಡಿಪೋರಾ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿತು ಎಂದು ಕಾಶ್ಮೀರ ಪೊಲೀಸ್ ವಲಯ ತಿಳಿಸಿದೆ. ಇದರೊಂದಿಗೆ ಕಾರ್ಯಾಚರಣೆಯಲ್ಲಿ ಹತರಾದ ಉಗ್ರರ ಸಂಖ್ಯೆ 2ಕ್ಕೇರಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕಾಶ್ಮೀರ ವಲಯ ಪೊಲೀಸ್ ಮಹಾನಿರೀಕ್ಷಕ ವಿಜಯ್ (ಐಜಿಪಿ) ಕುಮಾರ್ ಅವರು ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಕಾನ್ಸ್ಟೆಬಲ್ ರಿಯಾಜ್ ಅಹ್ಮದ್ನ ಹಂತಕ ಸೇರಿದಂತೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಿದರು.
J&K | An encounter breaks out in the Gundipora area of Pulwama. Police and security forces are on the job. Further details shall follow: Police
— ANI (@ANI) May 29, 2022
ಮೇ 13 ರಂದು ಪುಲ್ವಾಮಾದಲ್ಲಿ ಕಾನ್ಸ್ಟೆಬಲ್ ರಿಯಾಜ್ ಅಹ್ಮದ್ ನನ್ನು ಉಗ್ರರು ಕೊಂದು ಹಾಕಿದ್ದರು.