ಚೆನ್ನೈ: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಕ್ಕೆ ಒತ್ತಾಯಿಸಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ
ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ದರವನ್ನು ಕಡಿತ ಮಾಡದ ತಮಿಳುನಾಡು ಸರ್ಕಾರದ ನೀತಿಯನ್ನು ಖಂಡಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ, ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಸಚಿವಾಲಯದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
Published: 31st May 2022 03:54 PM | Last Updated: 31st May 2022 03:54 PM | A+A A-

ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ಚಿತ್ರ
ಚೆನ್ನೈ: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ದರವನ್ನು ಕಡಿತ ಮಾಡದ ತಮಿಳುನಾಡು ಸರ್ಕಾರದ ನೀತಿಯನ್ನು ಖಂಡಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ, ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಸಚಿವಾಲಯದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಕೆ. ಅಣ್ಣಾಮಲೈ, ಪೆಟ್ರೋಲ್ ಬೆಲೆಯಲ್ಲಿ ರೂ. 5 ಮತ್ತು ಡೀಸೆಲ್ ಮೇಲಿನ ಬೆಲೆಯಲ್ಲಿ 4 ರೂ. ಕಡಿತ ಮಾಡುವುದಾಗಿ ಡಿಎಂಕೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಬೆಲೆಯನ್ನು ಕಡಿತ ಮಾಡಿದೆ. ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ ಏನು ಭರವಸೆ ನೀಡಿತ್ತೋ ಅದನ್ನು ಪೂರ್ಣಗೊಳಿಸಬೇಕೆಂಬುದು ನಮ್ಮ ಬೇಡಿಕೆಯಾಗಿದೆ.
Tamil Nadu BJP workers along with state party president K Annamalai march towards the state's secretariat in Chennai condemning the state govt for not reducing the tax on petrol and diesel pic.twitter.com/4A3BhV79Sr
— ANI (@ANI) May 31, 2022
ಕೇಂದ್ರ ಸರ್ಕಾರ ಮೇ 21 ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ರೂ. 8 ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ರೂ. 6 ನಷ್ಟು ಕಡಿತ ಮಾಡಿದೆ. ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಬೆಲೆಯಲ್ಲಿ ರೂ. 9.5 ಮತ್ತು ಡೀಸೆಲ್ ಮೇಲಿನ ಬೆಲೆಯಲ್ಲಿ ರೂ. 7 ನಷ್ಟು ಕಡಿತವಾಗಲಿದೆ.