2023ನೇ ಸಾಲಿನ ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಸೆಪ್ಟೆಂಬರ್ 15ರವರೆಗೆ ಅವಕಾಶ

2023ನೇ ಸಾಲಿನ ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಮತ್ತು ಶಿಫಾರಸು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶವಿದ್ದು ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಮುಂದಿನ ವರ್ಷ ಗಣರಾಜ್ಯೋತ್ಸವ ದಿನ ಘೋಷಿಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

Published: 31st May 2022 08:53 AM  |   Last Updated: 31st May 2022 01:31 PM   |  A+A-


Representational image

ಸಾಂದರ್ಭಿಕ ಚಿತ್ರ

ANI

ನವದೆಹಲಿ: 2023ನೇ ಸಾಲಿನ ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಮತ್ತು ಶಿಫಾರಸು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶವಿದ್ದು ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಮುಂದಿನ ವರ್ಷ ಗಣರಾಜ್ಯೋತ್ಸವ ದಿನ ಘೋಷಿಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಪದ್ಮ ಪ್ರಶಸ್ತಿಗೆ ಹೆಸರುಗಳನ್ನು ಸೂಚಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಪದ್ಮ ಪ್ರಶಸ್ತಿಗೆ ಹೆಸರು, ಶಿಫಾರಸುಗಳನ್ನು ಆನ್ ಲೈನ್ ಮೂಲಕ ಮಾತ್ರ ಅದರ ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್ ನಲ್ಲಿ ಅಧಿಕೃತ ವೆಬ್ ಸೈಟ್ ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ.

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳು ಒಳಗೊಂಡಿರುತ್ತದೆ. 

1954 ರಲ್ಲಿ ಸ್ಥಾಪಿಸಲಾದ ಪದ್ಮ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಪ್ರಶಸ್ತಿಯು ದೇಶದಲ್ಲಿ ಯಾವುದೇ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮೆರೆದ ನಾಗರಿಕರನ್ನು ಗುರುತಿಸುವುದಾಗಿರುತ್ತದೆ. ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆಗಳಂತಹ ಹೀಗೆ ಹಲವು ಕ್ಷೇತ್ರಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆ ಮಾಡಿದವರಿಗೆ ನೀಡಲಾಗುತ್ತದೆ. 

ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ವ್ಯತ್ಯಾಸವಿಲ್ಲದ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರಾಗಿರುತ್ತಾರೆ. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಸಾರ್ವಜನಿಕ ವಲಯ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಾಗಿರುವುದಿಲ್ಲ.


Stay up to date on all the latest ರಾಷ್ಟ್ರೀಯ news
Poll
Vidhana Saudha

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬೊಮ್ಮಾಯಿ ಸರ್ಕಾರ ವಿಫಲವಾಗಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp