ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆಗೂಡಿದ ರೋಹಿತ್ ವೇಮುಲನ ತಾಯಿ, ಯಾತ್ರೆಗೆ ಬೆಂಬಲ

ತಮಗಾದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಗಿತ್ ವೇಮುಲಾ ಅವರ ತಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಇಲ್ಲಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಸೇರಿಕೊಂಡರು.
ರಾಹುಲ್ ಗಾಂಧಿ ಅವರೊಂದಿಗೆ ರೋಹಿತ್ ವೇಮುಲನ ತಾಯಿ ರಾಧಿಕಾ ವೇಮುಲ
ರಾಹುಲ್ ಗಾಂಧಿ ಅವರೊಂದಿಗೆ ರೋಹಿತ್ ವೇಮುಲನ ತಾಯಿ ರಾಧಿಕಾ ವೇಮುಲ

ಹೈದರಾಬಾದ್: ತಮಗಾದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಗಿತ್ ವೇಮುಲಾ ಅವರ ತಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಇಲ್ಲಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಸೇರಿಕೊಂಡರು.

ರಾಧಿಕಾ ವೇಮುಲ ಅವರು ಬೆಳಗಿನ ಜಾವ ಆರಂಭವಾದ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರೊಂದಿಗೆ ಸ್ವಲ್ಪ ಕಾಲ ನಡೆದರು.

ಭಾರತ್ ಜೋಡೋ ಯಾತ್ರೆಗೆ ಬೆಂಬಲ ಸೂಚಿಸಿದ ಅವರು, ರಾಹುಲ್ ಗಾಂಧಿ ಅವರೊಂದಿಗೆ ನಡೆದರು ಮತ್ತು ಬಿಜೆಪಿ-ಆರ್‌ಎಸ್‌ಎಸ್ ದಾಳಿಯಿಂದ ಸಂವಿಧಾನವನ್ನು ಉಳಿಸಲು ಕಾಂಗ್ರೆಸ್‌ಗೆ ಕರೆ ನೀಡಿದರು. ರೋಹಿತ್ ವೇಮುಲಾಗೆ ನ್ಯಾಯ ಸಿಗಲಿ. ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಿ, ದಲಿತರ ಪ್ರಾತಿನಿಧ್ಯವನ್ನು ಹೆಚ್ಚಿಸಿ, ಉನ್ನತ ನ್ಯಾಯಾಂಗದಲ್ಲಿ ದಲಿತರ ಪ್ರಾತಿನಿಧ್ಯ, ಎಲ್ಲರಿಗೂ ಶಿಕ್ಷಣ ಸಿಗಲಿ ಎಂದು ಸಭೆಯ ನಂತರ ರಾಧಿಕಾ ವೇಮುಲಾ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಿಂದ ಮತ್ತು ಹಲವಾರು ಪಕ್ಷದ ನಾಯಕರು ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಧಿಕಾ ವೇಮುಲಾ ಗಾಂಧಿಯೊಂದಿಗೆ ನಡೆಯುತ್ತಿರುವ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ.

ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 26 ವರ್ಷದ ದಲಿತ ವಿದ್ಯಾರ್ಥಿ ವೇಮುಲ, ತಮಗಾದ ಕಿರುಕುಳದಿಂದಾಗಿ ಜ.17, 2016 ರಂದು ಆತ್ಮಹತ್ಯೆ ಮಾಡಿಕೊಂಡರು. ಅವರ ಸಾವು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತೀಯತೆಯ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com