ಗುಜರಾತ್‌ನಲ್ಲಿ ಮೋರ್ಬಿ ಸೇತುವೆ ಕುಸಿತ ಭಾರಿ ಭ್ರಷ್ಟಾಚಾರದ ಪರಿಣಾಮ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಗುಜರಾತ್‌ನ ಮೋರ್ಬಿ ಸೇತುವೆ ಕುಸಿತವು ರಾಜ್ಯದಲ್ಲಿನ ಭಾರಿ ಭ್ರಷ್ಟಾಚಾರದ ಪರಿಣಾಮವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ ಮತ್ತು ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ಗುಜರಾತ್‌ನ ಮೋರ್ಬಿ ಸೇತುವೆ ಕುಸಿತವು ರಾಜ್ಯದಲ್ಲಿನ ಭಾರಿ ಭ್ರಷ್ಟಾಚಾರದ ಪರಿಣಾಮವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ ಮತ್ತು ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಗುಜರಾತ್‌ನ ಮೊರ್ಬಿ ನಗರದ ಮಚ್ಚು ನದಿಯ ತೂಗು ಸೇತುವೆ ಭಾನುವಾರ ಸಂಜೆ ಕುಸಿದು 134 ಜನರು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ಇಂತಹ ದೊಡ್ಡ ಘಟನೆ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರ ರಾಜೀನಾಮೆ ನೀಡಬೇಕು ಮತ್ತು ತಕ್ಷಣವೇ ವಿಧಾನಸಭೆ ಚುನಾವಣೆ ನಡೆಸಬೇಕು. ಮೊರ್ಬಿ ಸೇತುವೆ ಕುಸಿತವು ಬೃಹತ್ ಭ್ರಷ್ಟಾಚಾರದ ಪರಿಣಾಮವಾಗಿದೆ ಮತ್ತು ನಾನು ಸಂತ್ರಸ್ತರಿಗಾಗಿ ಪ್ರಾರ್ಥಿಸುತ್ತೇನೆ' ಎಂದು ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

'ಸೇತುವೆ ನಿರ್ಮಾಣದ ಅನುಭವವಿಲ್ಲದ ಕೈಗಡಿಯಾರ ತಯಾರಿಕಾ ಕಂಪನಿಗೆ ಏಕೆ ಅನುಮತಿ ನೀಡಲಾಯಿತು? ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಹಾಕಲು ಆಮ್ ಆದ್ಮಿ ಪಕ್ಷ ಇರುವುದರಿಂದ ಗುಜರಾತ್‌ನಲ್ಲಿ ಬಿಜೆಪಿ ಹೆಣಗಾಡುತ್ತಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com