ಉತ್ತರ ಪ್ರದೇಶ: ಹೆದ್ದಾರಿಯಲ್ಲಿ ಹಲವು ವಾಹನಗಳಿಗೆ ಬಸ್ ಡಿಕ್ಕಿ; 5 ಮಂದಿ ಸಾವು, ಹಲವರಿಗೆ ಗಾಯ

ಅಲಿಗಢದ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು, ಆರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಲಿಗಢ: ಇಲ್ಲಿನ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು, ಆರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಜಟ್ಟಾರಿ ಮತ್ತು ತಪ್ಪಲ್ ಟೌನ್‌ಶಿಪ್ ನಡುವಿನ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್‌ನಿಂದ ಬರುತ್ತಿದ್ದ ಖಾಸಗಿ ಬಸ್ ಹಠಾತ್ ನಿಯಂತ್ರಣ ಕಳೆದುಕೊಂಡು ಕಾರುಗಳು, ಟೆಂಪೋಗಳು ಮತ್ತು ದ್ವಿಚಕ್ರ ವಾಹನಗಳು ಸೇರಿದಂತೆ ಹತ್ತಾರು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಕೂಡಲೇ ಪೊಲೀಸರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು ಎಂದು ಅವರು ಹೇಳಿದರು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಮದ್ಯದ ಅಮಲಿನಲ್ಲಿದ್ದ ಬಸ್ ಚಾಲಕ ರಸ್ತೆಯಲ್ಲಿ ನಿಂತಿದ್ದ ಟೆಂಪೋಗೆ ಡಿಕ್ಕಿ ಹೊಡೆದು ಅಪಘಾತ  ಉಂಟುಮಾಡಿದ ಎಂದು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಜಿಲ್ಲಾ ಮತ್ತು ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com