ನ್ಯಾ. ಚಂದ್ರಚೂಡ್ ಸಿಜೆಐ ಆಗುವುದನ್ನು ವಿರೋಧಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನವೆಂಬರ್ 9, 2022 ರಂದು ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ....
ನ್ಯಾಯಮೂರ್ತಿ ಡಿವೈ ಚಂದ್ರಚೂಡ್
ನ್ಯಾಯಮೂರ್ತಿ ಡಿವೈ ಚಂದ್ರಚೂಡ್

ನವದೆಹಲಿ: ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನವೆಂಬರ್ 9, 2022 ರಂದು ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ತಡೆಯಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿಸಿದೆ.

ಸಿಜೆಐ ಯುಯು ಲಲಿತ್, ನ್ಯಾಯಮೂರ್ತಿಗಳಾದ ಎಸ್‌ಆರ್ ಭಟ್ ಮತ್ತು ಬೇಲಾ ಎಂ ತ್ರಿವೇದಿ  ಅವರ ಪೀಠ ಈ ಮನವಿಯನ್ನು "ತಪ್ಪಾಗಿ ಗ್ರಹಿಸಲಾಗಿದೆ" ಎಂದು ಪರಿಗಣಿಸಿ ಅರ್ಜಿ ವಜಾಗೊಳಿಸಲಾಗಿದೆ.

ಆದೇಶದಲ್ಲಿ "ಮನವಿಯನ್ನು ಪರಿಗಣಿಸಲು ಯಾವುದೇ ಸಕಾರಣ ಇಲ್ಲ. ಮನವಿಯನ್ನು ತಪ್ಪಾಗಿ ಗ್ರಹಿಸಲಾಗಿದೆ. ಆದ್ದರಿಂದ ಅದನ್ನು ವಜಾಗೊಳಿಸಲಾಗಿದೆ ತಿಳಿಸಲಾಗಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು "ಅಧಿಕಾರ ದುರುಪಯೋಗ" ಮಾಡಿಕೊಂಡಿದ್ದಾರೆ. ಹೀಗಾಗಿ ಅವರು ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸುವುದನ್ನು ತಡೆಯಬೇಕು ಎಂದು ರಶೀದ್ ಖಾನ್ ಪಠಾಣ್ ಅವರು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ವಕೀಲರು ತುರ್ತು ಪಟ್ಟಿಗಾಗಿ ಉಲ್ಲೇಖಿಸಿದ್ದರು.

ನಂತರ ಸಿಜೆಐ ಯು ಯು ಲಲಿತ್ ಅವರು ಅರ್ಜಿಯ ವಿಚಾರಣೆಯನ್ನು ಇಂದು ಮಧ್ಯಾಹ್ನ 12:45 ಕ್ಕೆ ನಡೆಸಲಾಗುವುದು ಎಂದು ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com