ಕೋವಿಡ್-19: ಕಳೆದ 24 ಗಂಟೆಗಳಲ್ಲಿ 1,321 ಹೊಸ ಪ್ರಕರಣ, 9 ಮಂದಿ ಸಾವು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,321 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,57,149 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
Published: 03rd November 2022 11:45 AM | Last Updated: 03rd November 2022 11:45 AM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,321 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,57,149 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 16,098 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಗುರುವಾರ ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 5 ಸೇರಿದಂತೆ ಒಟ್ಟು 9 ಮಂದಿ ಸಾವಿಗೀಡಾಗಿದ್ದು, ಈವರೆಗೆ 5,30,461 ಜನರು ಸೋಂಕಿನಿಂದ ಪ್ರಾಣಕಳೆದುಕೊಂಡಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.04ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.78ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸದ್ಯ ಈವರೆಗೆ 4,41,10,590 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ. ಸಚಿವಾಲಯದ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೂ 219.67 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.