ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಅತಿವೃಷ್ಟಿಯಿಂದಾದ ಹಾನಿಗೆ ತತ್ತರಿಸಿ ಮಧ್ಯ ಪ್ರದೇಶದ ಛಿಂದ್ವಾರದಲ್ಲಿ ರೈತ ಆತ್ಮಹತ್ಯೆ

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಸಾಲ ಮರುಪಾವತಿಸಲು ಸಾಧ್ಯವಾಗದೆ 54 ವರ್ಷದ ರೈತರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಛಿಂದ್ವಾರಾ: ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಬ್ಯಾಂಕ್ ಸಾಲ ಮರುಪಾವತಿಸಲು ಸಾಧ್ಯವಾಗದೆ 54 ವರ್ಷದ ರೈತರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ರಾಜೇಗಾಂವ್ ಗ್ರಾಮದ ನಿವಾಸಿ ರಾಂಪತ್ ಚೌಧರಿ (54) ಬುಧವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೀರ್ಘಕಾಲದ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಸುಮಾರು 3 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಅವರು ಹೆಣಗಾಡುತ್ತಿದ್ದರು ಎಂದು ಮೊಹ್ಖೇದ್ ಪೊಲೀಸ್ ಠಾಣೆ ಪ್ರಭಾರಿ ಗೋಪಾಲ್ ಘೋಸ್ಲೆ ತಿಳಿಸಿದ್ದಾರೆ.

ಸದ್ಯ ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಾಲ್ಕು ಎಕರೆ ಜಮೀನು ಹೊಂದಿದ್ದ ಚೌಧರಿ 2 ರೂಪಾಯಿ ಸಾಲ ಮಾಡಿದ್ದರು. ಅವರ ಕುಟುಂಬದ ಪ್ರಕಾರ 2020ರಲ್ಲಿ 17 ಲಕ್ಷ ಮತ್ತು 2021 ರಲ್ಲಿ 65,000 ರೂ. ಸಾಲ ಮಾಡಿದ್ದರು ಎನ್ನಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com