ಸೇತುವೆ ಕುಸಿತ ಪ್ರಕರಣ: ಮೋರ್ಬಿ ಪುರಸಭೆ ಮುಖ್ಯಾಧಿಕಾರಿ ಅಮಾನತು
ಸೇತುವೆ ಕುಸಿದು 135 ಜನರ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಾಲಾ ಅವರನ್ನು ಗುಜರಾತ್ ಸರ್ಕಾರ ಅಮಾನತುಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
Published: 04th November 2022 12:59 PM | Last Updated: 04th November 2022 12:59 PM | A+A A-

ಕುಸಿದು ಬೀಳುತ್ತಿರುವ ಸೇತುವೆ.
ಮೋರ್ಬಿ: ಸೇತುವೆ ಕುಸಿದು 135 ಜನರ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಾಲಾ ಅವರನ್ನು ಗುಜರಾತ್ ಸರ್ಕಾರ ಅಮಾನತುಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಮೋರ್ಬಿ ಸೇತುವೆ ಕುಸಿದುಬಿದ್ದು 135ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಮೃತರಲ್ಲಿ ಮಹಿಳೆಯರು ಹಾಗೂ ಮಕ್ಕಳೂ ಸೇರಿದ್ದರು.
ಘಟನೆ ಸಂಬಂಧ "ರಾಜ್ಯ ನಗರಾಭಿವೃದ್ಧಿ ಇಲಾಖೆಯು ಮೊರ್ಬಿ ಪುರಸಭೆಯ ಮುಖ್ಯ ಅಧಿಕಾರಿ ಸಂದೀಪ್‌ಸಿನ್ಹ್ ಝಲಾ ಅವರನ್ನು ಅಮಾನತುಗೊಳಿಸಿದೆ" ಎಂದು ಮೊರ್ಬಿ ಜಿಲ್ಲಾಧಿಕಾರಿ ಜಿ ಟಿ ಪಾಂಡ್ಯ ತಿಳಿಸಿದ್ದಾರೆ.
ಇದನ್ನೂ ಓದಿ: ಮೋರ್ಬಿ ಸೇತುವೆ ದುರಸ್ತಿ: ಫ್ಲೋರ್ ಮಾತ್ರ ಬದಲಿಸಲಾಗಿತ್ತು, ಅದರ ಕೇಬಲ್ ಬದಲಿಸಿರಲಿಲ್ಲ!
ಮುಂದಿನ ಆದೇಶದವರೆಗೆ ಮೋರ್ಬಿಯ ನಿವಾಸಿ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮುಖ್ಯ ಅಧಿಕಾರಿಯ ಹೆಚ್ಚುವರಿ ಪ್ರಭಾರವನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮೋರ್ಬಿ ಪುರಸಭೆಯು ಸೇತುವೆ ದುರಸ್ತಿ ಮತ್ತು ನಿರ್ವಹಣೆಯ ಗುತ್ತಿಗೆಯನ್ನು 15 ವರ್ಷಗಳ ಕಾಲ ಒರೆವಾ ಗುಂಪಿಗೆ ನೀಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದೂವರೆಗೆ ಒಂಬತ್ತು ಜನರನ್ನು ಬಂಧನಕ್ಕೊಳಪಡಿಸಿದ್ದಾರೆ.