ನವದೆಹಲಿ: ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಶುಕ್ರವಾರ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಡಿದ್ದು, ನವೆಂಬರ್ 10 ರಂದು ತನ್ನ ಮುಂದೆ ಹಾಜರಾಗುವಂತೆ ಸೂಚಿಸಿದೆ.
ವಾಯು ಮಾಲಿನ್ಯ ಸಮಸ್ಯೆಯನ್ನು ಪರಿಹರಿಸಲು ಇದುವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ದೆಹಲಿಯಲ್ಲಿ ಮಾಲಿನ್ಯವನ್ನು ಕಡಿಮೆ ಮಾಡಲು ಇನ್ನೂ ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ) ಅಂಕಿಅಂಶಗಳ ಪ್ರಕಾರ ಶುಕ್ರವಾರ ಬೆಳಗ್ಗೆ 9:30ಕ್ಕೆ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ(ಎಕ್ಯೂಐ) 426(ತೀವ್ರ) ಇತ್ತು.
400 ಕ್ಕಿಂತ ಹೆಚ್ಚು AQI ಹೊಂದಿದ್ದರೆ ಅದನ್ನು 'ತೀವ್ರ' ಎಂದು ಪರಿಗಣಿಸಲಾಗುತ್ತದೆ ಮತ್ತು ಜನರ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.
ಕೃಷಿ ತ್ಯಾಜ್ಯ ಸುಡುವುದನ್ನು ತಡೆಯಲು ಆಯಾ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಒಂದು ವಾರದೊಳಗೆ ತಿಳಿಸುವಂತೆ ಎನ್ಎಚ್ಆರ್ ಸಿ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳನ್ನು ಸೂಚಿಸಿದೆ.
Advertisement