ತಮಿಳುನಾಡು: 44 ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ

ಕೆಲವು ಸ್ಥಳಗಳನ್ನು ಹೊರತುಪಡಿಸಿ ಇತರೆ ಸ್ಥಳಗಳಲ್ಲಿ ಅನುಮತಿ ನಿರಾಕರಿಸಲು ಯಾವುದೇ ಪ್ರತಿಕೂಲ ಪರಿಸ್ಥಿತಿ ಕಂಡುಬಂದಿಲ್ಲ. ನವೆಂಬರ್ 6 ರಂದು ತಮಿಳುನಾಡಿನಾದ್ಯಂತ 44 ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಸಬಹುದು...
ಆರ್ ಎಸ್ ಎಸ್ ಸಾಂದರ್ಭಿಕ ಚಿತ್ರ
ಆರ್ ಎಸ್ ಎಸ್ ಸಾಂದರ್ಭಿಕ ಚಿತ್ರ

ಚೆನ್ನೈ: ಕೆಲವು ಸ್ಥಳಗಳನ್ನು ಹೊರತುಪಡಿಸಿ ಇತರೆ ಸ್ಥಳಗಳಲ್ಲಿ ಅನುಮತಿ ನಿರಾಕರಿಸಲು ಯಾವುದೇ ಪ್ರತಿಕೂಲ ಪರಿಸ್ಥಿತಿ ಕಂಡುಬಂದಿಲ್ಲ. ನವೆಂಬರ್ 6 ರಂದು ತಮಿಳುನಾಡಿನಾದ್ಯಂತ 44 ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಸಬಹುದು ಎಂದ ಮದ್ರಾಸ್ ಹೈಕೋರ್ಟ್ ಶುಕ್ರವಾರ ಹೇಳಿದೆ.

ಆದಾಗ್ಯೂ, ಕೊಯಮತ್ತೂರು ನಗರ, ಪೊಲ್ಲಾಚಿ, ಮೆಟ್ಟುಪಾಳ್ಯಂ, ಪಲ್ಲಡಂ, ಅರುಮನೈ ಮತ್ತು ನಾಗರ್‌ಕೋಯಿಲ್ ಸೇರಿದಂತೆ ಆರು ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಸಲು ನ್ಯಾಯಮೂರ್ತಿ ಜಿಕೆ ಇಳಂತಿರಾಯನ್ ಅವರು ಅನುಮತಿ ನಿರಾಕರಿಸಿದ್ದಾರೆ.

ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಾರ್ವಜನಿಕ ಸಭೆಗಳನ್ನು ಆವರಣದೊಳಗೆ ನಡೆಸಬೇಕು ಮತ್ತು ಹೊರಾಂಗಣದಲ್ಲಿ ಮೆರವಣಿಗೆಗಳನ್ನು ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ತಮಿಳುನಾಡು ಪೊಲೀಸರು ಸಲ್ಲಿಸಿದ ಗುಪ್ತಚರ ವರದಿಯನ್ನು ಪರಿಶೀಲಿಸಿದಾಗ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ನಿದರ್ಶನಗಳು ಕೆಲವು ಸ್ಥಳಗಳಲ್ಲಿ ಮಾತ್ರ ಕಂಡುಬಂದಿದೆ. ಅವುಗಳನ್ನು ಹೊರತುಪಡಿಸಿ ಇತರೆ ಸ್ಥಳಗಳಲ್ಲಿ ಅನುಮತಿ ನಿರಾಕರಿಸಲು ಯಾವುದೇ ಪ್ರತಿಕೂಲ ಪರಿಸ್ಥಿತಿ ಕಂಡುಬಂದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಪಿಎಫ್‌ಐ ಮೇಲಿನ ನಿಷೇಧದ ನಂತರ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಉಲ್ಲೇಖಿಸಿ ಆರಂಭದಲ್ಲಿ ಅಕ್ಟೋಬರ್ 2 ರಂದು ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ತಮಿಳುನಾಡು ಪೊಲೀಸರು ಅನುಮತಿ ನೀಡಲು ನಿರಾಕರಿಸಿದ ನಂತರ ಆರ್‌ಎಸ್‌ಎಸ್ ಸದಸ್ಯರು ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಗಳ ಮೇಲೆ ಮದ್ರಾಸ್ ಹೈಕೋರ್ಟ್ ಈ ಆದೇಶ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com