ಜಿದ್ದಾಜಿದ್ದಿ ಪೈಪೋಟಿಗೆ ಸಾಕ್ಷಿಯಾಗಿರುವ ಆರು ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತ ಎಣಿಕೆ

ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.

ಬಿಜೆಪಿ ಮತ್ತು ಇತರ ಪ್ರಾದೇಶಿಕ ಪಕ್ಷಗಳ ಜಿದ್ದಾಜಿದ್ದಿ ಪೈಪೋಟಿಗೆ ಸಾಕ್ಷಿಯಾಗಿರುವ 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ  ಮತಎಣಿಕೆ ಇಂದು (ನ 6) ನಡೆಯಲಿದೆ. ಬಿಹಾರದ ಮೊಕಮಾ ಮತ್ತು ಗೋಪಾಲ್​ಗಂಜ್ ವಿಧಾನಸಭಾ ಕ್ಷೇತ್ರ, ಮಹಾರಾಷ್ಟ್ರದ ಅಂಧೇರಿ (ಪೂರ್ವ), ಹರಿಯಾಣದ ಅದಮ್​ಪುರ್, ತೆಲಂಗಾಣದ ಮುನುಗೋಡ್, ಉತ್ತರ ಪ್ರದೇಶದ ಗೋಲಾ ಗೋಕರ್ಣನಾಥ್ ಮತ್ತು ಒಡಿಶಾದ ಧಾಮ್​ನಗರ್ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಈ ಏಳು ಕ್ಷೇತ್ರಗಳ ಪೈಕಿ ಬಿಜೆಪಿ ಮೂರು, ಕಾಂಗ್ರೆಸ್ 2, ಶಿವಸೇನೆ ಮತ್ತು ಆರ್​ಜೆಡಿ ತಲಾ ಒಂದು ಕ್ಷೇತ್ರಗಳನ್ನು ಹೊಂದಿತ್ತು

ಎಲ್ಲ ಏಳು ಕ್ಷೇತ್ರಗಳಲ್ಲಿ ಮತಎಣಿಕೆ ಆರಂಭಗೊಂಡಿದ್ದು, ಯಾವ ಪಕ್ಷ ಗೆಲ್ಲಲಿದೆ ಎಂಬುದು ಕುತೂಹಲ ಕೆರಳಿಸಿವೆ.  ಭಾರಿ ಕುತೂಹಲ ಕೆರಳಿಸಿರುವ ತೆಲಂಗಾಣದ ಮುನುಗೋಡ್‌ ಕ್ಷೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ನಾಲ್ಕನೇ ಸುತ್ತಿನ ಮತ ಎಣಿಕೆ ಅಂತ್ಯಕ್ಕೆ ಕೋಮಟಿರೆಡ್ಡಿ ರಾಜ್ ಗೋಪಾಲ ರೆಡ್ಡಿ 1,100 ಮತಗಳ ಮುನ್ನಡೆ ಗಳಿಸಿದ್ದಾರೆ.

ಹರಿಯಾಣದ ಆದಂಪುರ ಮತ್ತು ಉತ್ತರ ಪ್ರದೇಶದ ಗೋಲ ಗೋಕರ್ಣನಾಥ ಕ್ಷೇತ್ರದಲ್ಲೂ ಬಿಜೆಪಿ ಮುನ್ನಡೆ ಮುನ್ನಡೆಯಲ್ಲಿದೆ.  ಬಿಹಾರದ ಮೊಕಾಮಾ ಕ್ಷೇತ್ರದಲ್ಲಿ ಆರ್‌ಜೆಡಿಯ ನೀಲಂ ದೇವಿ ಮುನ್ನಡೆಯಲ್ಲಿದ್ದಾರೆ. ಮಹಾರಾಷ್ಟ್ರದ ಅಂಧೇರಿ ಪೂರ್ವದಲ್ಲಿ ಉದ್ಧವ್ ಠಾಕ್ರೆ ಅವರ ಶಿವ ಸೇನಾದ ನಾಯಕ ಋತುಜ ಲಟಕೆ, 4,277 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.

ಬಿಹಾರದಲ್ಲಿ ಎರಡು ಮತ್ತು ಮಹಾರಾಷ್ಟ್ರ, ಹರಿಯಾಣ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು. ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಗೆ ಪ್ರಾದೇಶಿಕ ಪಕ್ಷಗಳು ಸವಾಲೊಡ್ಡಿವೆ.

ನವೆಂಬರ್ 3 ರಂದು ಮತದಾನ ನಡೆದಿದ್ದು, ಇಂದು ಮತ ಎಣಿಕೆ ನಡೆಯುತ್ತಿದೆ. ಚುನಾವಣಾ ಆಯೋಗದ ಟ್ರೆಂಡ್‌ಗಳ ಪ್ರಕಾರ ಆರು ರಾಜ್ಯಗಳಾದ್ಯಂತ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ, ತೆಲಂಗಾಣದ ಮುನುಗೋಡೆ ಕ್ಷೇತ್ರದಲ್ಲಿ ಗುರುವಾರ ಅತಿ ಹೆಚ್ಚು ಮತದಾನವಾಗಿದೆ. ಮಹಾರಾಷ್ಟ್ರ, ಹರಿಯಾಣ, ಬಿಹಾರ, ತೆಲಂಗಾಣ, ಒಡಿಶಾ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಖಾಲಿ ಇರುವ ಏಳು ಸ್ಥಾನಗಳಿಗೆ ಗುರುವಾರ ಉಪಚುನಾವಣೆ ನಡೆಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com