ಇಡಬ್ಲ್ಯೂಎಸ್ ಮೀಸಲಾತಿ: ಸುಪ್ರೀಂ ತೀರ್ಪುನಿಂದ ಸಾಮಾಜಿಕ ನ್ಯಾಯ ಹೋರಾಟಕ್ಕೆ ಹಿನ್ನಡೆ ಎಂದ ಸ್ಟಾಲಿನ್

ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ(ಇಡಬ್ಲ್ಯುಎಸ್) ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 10 ರಷ್ಟು ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದರಿಂದ ಶತಮಾನದ ಸಾಮಾಜಿಕ ನ್ಯಾಯ ಹೋರಾಟಕ್ಕೆ ತೀವ್ರ...
ಎಂ.ಕೆ. ಸ್ಟಾಲಿನ್
ಎಂ.ಕೆ. ಸ್ಟಾಲಿನ್

ಚೆನ್ನೈ: ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ(ಇಡಬ್ಲ್ಯುಎಸ್) ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 10 ರಷ್ಟು ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದರಿಂದ ಶತಮಾನದ ಸಾಮಾಜಿಕ ನ್ಯಾಯ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸೋಮವಾರ ಹೇಳಿದ್ದಾರೆ.

ತಮಿಳುನಾಡಿನ ರಾಜಕೀಯ ಪಕ್ಷಗಳು ಮತ್ತು ಎಲ್ಲಾ ಸಮಾನ ಮನಸ್ಕ ಸಂಘಟನೆಗಳು ಸಾಮಾಜಿಕ ನ್ಯಾಯ ರಕ್ಷಿಸಲು ಒಗ್ಗೂಡಬೇಕು ಮತ್ತು ಅದನ್ನು ದೇಶಾದ್ಯಂತ ಕೇಳಬೇಕು ಎಂದು ಆಡಳಿತಾರೂಢ ಡಿಎಂಕೆ ಅಧ್ಯಕ್ಷ ಸ್ಟಾಲಿನ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಇಡಬ್ಲ್ಯೂಎಸ್ ಮೀಸಲಾತಿ ಸಿಂಧುತ್ವ ಎತ್ತಿ ಹಿಡಿದಿರುವ ಬಗ್ಗೆ ಪ್ರತಿಕ್ರಿಯಿಸಿದರ ತಮಿಳುನಾಡು ಸಿಎಂ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಮೀಸಲಾತಿಯ ವಿರುದ್ಧ ಡಿಎಂಕೆ ನಡೆಸಿದ ಕಾನೂನು ಹೋರಾಟವನ್ನು ಸ್ಮರಿಸಿದರು. ಈ ಪ್ರಕರಣದ ಇಂದಿನ ತೀರ್ಪು ಸಾಮಾಜಿಕ ನ್ಯಾಯಕ್ಕಾಗಿ ಶತಮಾನದ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದರು.

ಸುಪ್ರೀಂ ತೀರ್ಪನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಇಡಬ್ಲ್ಯೂಎಸ್ ಮೀಸಲಾತಿ ವಿರುದ್ಧ ಹೋರಾಟ ಮುಂದುವರಿಸುವ ಕುರಿತು ತೀರ್ಮಾನಿಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com