ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಾಯೋಗಿಕ ಓಡಾಟ ಆರಂಭ, ನ.11ಕ್ಕೆ ಪ್ರಧಾನಿ ಚಾಲನೆ

ಚೆನ್ನೈ - ಬೆಂಗಳೂರು-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರ ರೈಲು ಇಂದು ಮುಂಜಾನೆ 5.50ರ ಸಮಯದಲ್ಲಿ ಚೆನ್ನೈನ ಎಂ.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿತು.  
ವಂದೇ ಭಾರತ್ ಎಕ್ಸ್ ಪ್ರೆಸ್
ವಂದೇ ಭಾರತ್ ಎಕ್ಸ್ ಪ್ರೆಸ್

ಚೆನ್ನೈ: ಚೆನ್ನೈ - ಬೆಂಗಳೂರು-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರ ರೈಲು ಇಂದು ಮುಂಜಾನೆ 5.50ರ ಸಮಯದಲ್ಲಿ ಚೆನ್ನೈನ ಎಂ.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿತು. ಚೆನ್ನೈ-ಬೆಂಗಳೂರು-ಮೈಸೂರು ನಡುವಣ ವಂದೇ ಭಾರತ್ ಎಕ್ಸ್‌ಪ್ರೆಸ್ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿದೆ. ಈ ಮಾರ್ಗದಲ್ಲಿ ಇದೇ 11ರಂದು ರೈಲು ಅಧಿಕೃತವಾಗಿ ಸಂಚರಿಸಲಿದೆ. 

ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ನವೆಂಬರ್ 11ರಂದು ಚಾಲನೆ ನೀಡಲಿದ್ದಾರೆ. ಇದು ದಕ್ಷಿಣ ಭಾರತದಲ್ಲಿ ಮೊದಲ ಸ್ವದೇಶಿ ನಿರ್ಮಿತ ಅತಿ ವೇಗದ ರೈಲು ಆಗಿದ್ದು ದೇಶದಲ್ಲಿ 5ನೆಯದ್ದಾಗಿದೆ.ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ 2019ರ ಫೆಬ್ರವರಿ 15ರಂದು ದೆಹಲಿ-ಕಾನ್ಪುರ-ಅಲಹಾಬಾದ್-ವಾರಣಾಸಿ ಮಾರ್ಗವಾಗಿ ಸಂಚಾರಕ್ಕೆ ಮೊದಲ ಬಾರಿಗೆ ಚಾಲನೆ ನೀಡಲಾಗಿತ್ತು. 

ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ ಹೆಚ್ಚು ಒತ್ತು ನೀಡುವ ಕೇಂದ್ರ ಸರ್ಕಾರ, ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಅದರ ಒಂದು ಭಾಗವಾಗಿದೆ. ಕಳೆದ ವರ್ಷ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂದರ್ಭದಲ್ಲಿ 75 ವಾರಗಳ ಕಾಲ ದೇಶದ 75 ಭಾಗಗಳಿಗೆ 75 ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಸಂಪರ್ಕಿಸಲಾಗುವುದು ಎಂದು ಹೇಳಿದ್ದರು. 

ವಂದೇ ಭಾರತ್ ವಿಶೇಷತೆಯೇನು?: ವೇಗ, ಸುರಕ್ಷತೆ ಮತ್ತು ಸೇವೆ ಈ ರೈಲಿನ ಪ್ರಮುಖ ವಿಶೇಷತೆಯಾಗಿದೆ. ಚೆನ್ನೈಯ ಇಂಟಗ್ರಲ್ ಕೋಚ್ ಫ್ಯಾಕ್ಟರಿ, ರೈಲ್ವೆ ಉತ್ಪಾದನಾ ಘಟಕ ಕೇವಲ 18 ತಿಂಗಳಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಉತ್ಪಾದಿಸಿವೆ. 

ವಂದೇ ಭಾರತ್ ಎಕ್ಸ್ ಪ್ರೆಸ್ ಗರಿಷ್ಠ 160 ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದ್ದು ಶತಾಬ್ರಿ ರೈಲಿನ ಮಾದರಿಯಲ್ಲಿರಲಿದ್ದು ಪ್ರಯಾಣಿಕರಿಗೆ ಉತ್ತಮ ಪ್ರಯಾಣ ಅನುಭವ ನೀಡುತ್ತದೆ. ವೇಗ ಮತ್ತು ಅನುಕೂಲ ನಿಟ್ಟಿನಲ್ಲಿ ಭಾರತೀಯ ರೈಲ್ವೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com