ಸಿಸೋಡಿಯಾ ವಿರುದ್ಧ ಅಸ್ಸಾಂ ಸಿಎಂ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ!

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಗುವಾಹಟಿ ಹೈಕೋರ್ಟ್ ನಿರಾಕರಿಸಿದೆ.
ಮನೀಶ್ ಸಿಸೋಡಿಯಾ-ಹಿಮಂತ್ ಬಿಸ್ವಾ ಶರ್ಮಾ
ಮನೀಶ್ ಸಿಸೋಡಿಯಾ-ಹಿಮಂತ್ ಬಿಸ್ವಾ ಶರ್ಮಾ

ಗುವಾಹಟಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಗುವಾಹಟಿ ಹೈಕೋರ್ಟ್ ನಿರಾಕರಿಸಿದೆ.

ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಹಿಂದೆ ಆಮ್ ಆದ್ಮಿ ಪಕ್ಷದ ನಾಯಕನಿಗೆ ಖುದ್ದು ಹಾಜರಾಗಲು ಸಮನ್ಸ್ ನೀಡಿತ್ತು. ಆದರೆ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ್ದರಿಂದ ಕೆಳ ನ್ಯಾಯಾಲಯದ ಆದೇಶವನ್ನು ಮರುಸ್ಥಾಪಿಸಿದೆ. 

ಹೀಗಾಗಿ ನವೆಂಬರ್ 19ರಂದು ಕೋರ್ಟ್ ಮುಂದೆ ಸಿಸೋಡಿಯಾ ಹಾಜರಾಗಬೇಕಾಗುತ್ತದೆ. ಅಸ್ಸಾಂ ಸಿಎಂ ಕುಟುಂಬ ಪಿಪಿಇ ಕಿಟ್‌ಗಳ ಹಗರಣದಲ್ಲಿ ತೊಡಗಿತ್ತು ಎಂದು ಸಿಸೋಡಿಯಾ ನೀಡಿದ್ದ ಹೇಳಿಕೆ ವಿರುದ್ಧ ಹಿಮಂತ್ ಬಿಸ್ವಾ ಶರ್ಮಾ ಕೋರ್ಟ್ ಮೆಟ್ಟಿಲೇರಿದ್ದರು.

ಅಸ್ಸಾಂನ ಅಡ್ವೊಕೇಟ್ ಜನರಲ್ ದೇವಜಿತ್ ಸೈಕಿಯಾ ಅವರು ಪತ್ರಕರ್ತರಿಗೆ, ಕೆಳ ನ್ಯಾಯಾಲಯವು ಸಿಸೋಡಿಯಾ ಅವರಿಗೆ ಖುದ್ದಾಗಿ ಹಾಜರಾಗಲು ಸಮನ್ಸ್ ಕಳುಹಿಸಿದೆ ಆದರೆ ಅವರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿಗೆ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ತೆರಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com