ರಾಜ್ಯಪಾಲರ ಕೂಡಲೇ ವಜಾಗೊಳಿಸಿ: ರಾಷ್ಟ್ರಪತಿಗಳಿಗೆ ತಮಿಳುನಾಡು ಆಡಳಿತಾರೂಢ ಡಿಎಂಕೆ ಪಕ್ಷ ಮನವಿ
ತಮಿಳುನಾಡು ರಾಜ್ಯಪಾಲ ಆರ್ಎನ್ ರವಿ ಅವರನ್ನು ವಜಾಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ಮನವಿ ಸಲ್ಲಿಸಿದೆ.
Published: 09th November 2022 10:50 AM | Last Updated: 09th November 2022 10:53 AM | A+A A-

ತಮಿಳುನಾಡು ರಾಜ್ಯಪಾಲ ಆರ್ಎನ್.ರವಿ.
ನವದೆಹಲಿ/ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್ಎನ್ ರವಿ ಅವರನ್ನು ವಜಾಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ಮನವಿ ಸಲ್ಲಿಸಿದೆ.
ರಾಜ್ಯಪಾಲ ಆರ್.ಎನ್.ರವಿ ಅವರು “ಶಾಂತಿಗೆ ಬೆದರಿಕೆ’’ ಆಗಿದ್ದು, ಅವರು ಕೋಮು ದ್ವೇಷವನ್ನು ಪ್ರಚೋದಿಸುತ್ತಾರೆ. ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರಕಾರಕ್ಕೆ ಜನರ ಸೇವೆಗೆ ಅಡ್ಡಿಪಡಿಸಿದ ಕಾರಣ ಅವರನ್ನು ಕೂಡಲೇ ಪದಚ್ಯುತಗೊಳಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.
ಇದನ್ನೂ ಓದಿ: ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ: ಕೇರಳ ರಾಜ್ಯಪಾಲರ ಇಬ್ಬರು ಕಾನೂನು ಸಲಹೆಗಾರರ ರಾಜೀನಾಮೆ
"ರಾಜ್ಯಪಾಲ ಆರ್.ಎನ್. ರವಿ ಅವರು ಸಂವಿಧಾನ ಹಾಗೂ ಕಾನೂನನ್ನು ಸಂರಕ್ಷಿಸಲು, ರಕ್ಷಿಸಲು ಮತ್ತು ಸಮರ್ಥಿಸಿಕೊಳ್ಳುತ್ತೇನೆಂಬ ವಚನವನ್ನು ಉಲ್ಲಂಘಿಸಿದ್ದಾರೆ" ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಡಿಎಂಕೆ ತಿಳಿಸಿದೆ.
ಇದೇ ವೇಳೆ ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಸಮ್ಮತಿ ನೀಡಲು ರಾಜ್ಯಪಾಲರು ಅನಗತ್ಯವಾಗಿ ವಿಳಂಬ ಮಾಡುತ್ತಾರೆ ಎಂದು ಡಿಎಂಕೆ ಆರೋಪಿಸಿದೆ.