ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮುಂದೆ ವಿಚಾರಣೆಗೆ ಜಾಕ್ವೆಲಿನ್ ಫೆರ್ನಾಂಡಿಸ್‌ ಹಾಜರು

ನಟಿ ಜಾಕ್ವೆಲಿನ್ ಫೆರ್ನಾಂಡೀಸ್ ಇಂದು ಗುರುವಾರ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ. ವಂಚಕ ಸುಕೇಶ್ ಚಂದ್ರಶೇಖರ್ ಜೊತೆ 200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಕೇಸಿಗೆ ಸಂಬಂಧಪಟ್ಟಂತೆ ವಿಚಾರಣೆಗೆ ಅವರು ಹಾಜರಾಗಿದ್ದಾರೆ.
ವಿಚಾರಣೆಗೆ ಹಾಜರಾದ ನಟಿ ಜಾಕ್ವೆಲಿನ್ ಫೆರ್ನಾಂಡಿಸ್
ವಿಚಾರಣೆಗೆ ಹಾಜರಾದ ನಟಿ ಜಾಕ್ವೆಲಿನ್ ಫೆರ್ನಾಂಡಿಸ್

ನವದೆಹಲಿ: ನಟಿ ಜಾಕ್ವೆಲಿನ್ ಫೆರ್ನಾಂಡೀಸ್ ಇಂದು ಗುರುವಾರ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ. ವಂಚಕ ಸುಕೇಶ್ ಚಂದ್ರಶೇಖರ್ ಜೊತೆ 200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಕೇಸಿಗೆ ಸಂಬಂಧಪಟ್ಟಂತೆ ವಿಚಾರಣೆಗೆ ಅವರು ಹಾಜರಾಗಿದ್ದಾರೆ.

ಪ್ರಕರಣದಲ್ಲಿ ತಮ್ಮನ್ನು ಸಂಪೂರ್ಣವಾಗಿ ನಿರ್ದೋಷಿ ಎಂದು ಪ್ರಕಟಿಸಿ ಮುಕ್ತಿಗೊಳಿಸಬೇಕೆಂದು ಕೋರಿ ಜಾಕ್ವೆಲಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆಂದು ಕೋರ್ಟ್ ಅವರನ್ನು ಹಾಜರಾಗುವಂತೆ ಸೂಚಿಸಿದೆ.

ಸುಕೇಶ್ ಚಂದ್ರಶೇಖರ್ ಮತ್ತು ಇತರರನ್ನು ಒಳಗೊಂಡ 200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ವಿಚಾರಣೆ ಎದುರಿಸುತ್ತಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ದೆಹಲಿಯ ಪಟಿಯಾಲ ಹೌಸ್ ಕಳೆದ ತಿಂಗಳು 22ರಂದು ಇಂದಿನವರೆಗೆ ವಿಸ್ತರಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com