ನಾಗ್ಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡಿದ ಪ್ರಾಣಿ ಕಾರ್ಯಕರ್ತನಿಗೆ ಥಳಿತ, ಎರಡೂ ಕಿವಿಗೆ ಹಾನಿ
ಮಹಾರಾಷ್ಟ್ರದ ನಾಗ್ಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡಿದ್ದಕ್ಕಾಗಿ ಮೂವರು ವ್ಯಕ್ತಿಗಳು ವ್ಯಕ್ತಿಯೊಬ್ಬರಿಗೆ ಥಳಿಸಿದ್ದು, 33 ವರ್ಷದ ಪ್ರಾಣಿ ಕಾರ್ಯಕರ್ತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 10th November 2022 01:17 PM | Last Updated: 10th November 2022 04:39 PM | A+A A-

ಪ್ರಾತಿನಿಧಿಕ ಚಿತ್ರ
ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡಿದ್ದಕ್ಕಾಗಿ ಮೂವರು ವ್ಯಕ್ತಿಗಳು ವ್ಯಕ್ತಿಯೊಬ್ಬರಿಗೆ ಥಳಿಸಿದ್ದು, 33 ವರ್ಷದ ಪ್ರಾಣಿ ಕಾರ್ಯಕರ್ತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ತಡರಾತ್ರಿ ಮಂಕಾಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಂತ್ರಸ್ತ ವಿಕಾಸ್ ಕೃಷ್ಣ ಮಾಳವಾರ್ ಅವರು ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದಾಗ ಮೂವರು ಆರೋಪಿಗಳು ಸ್ಥಳಕ್ಕೆ ಬಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಮಾಂಕಾಪುರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವೇಳೆ ಆರೋಪಿಗಳು ಸಂತ್ರಸ್ತನನ್ನು ತೀವ್ರವಾಗಿ ಥಳಿಸಿದ್ದಾರೆ. ಮಾಲ್ವಾರ್‌ಗೆ ಗಂಭೀರ ಗಾಯಗಳಾಗಿದ್ದು, ನಂತರ ಪೊಲೀಸರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ದಾಳಿಯಲ್ಲಿ ಸಂತ್ರಸ್ತನ ಎರಡೂ ಕಿವಿತಮಟೆಗಳು ಹಾನಿಗೊಳಗಾಗಿವೆ ಎಂದು ವೈದ್ಯರು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಆರೋಪಿಗಳ ವಿರುದ್ಧ ಸೂಕ್ತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.