ಯುಪಿ ಉಪಚುನಾವಣೆ: ಮೈನ್‌ಪುರಿಯಿಂದ ಎಸ್‌ಪಿ ಅಭ್ಯರ್ಥಿಯಾಗಿ ಡಿಂಪಲ್ ಯಾದವ್ ಕಣಕ್ಕೆ
ಡಿಸೆಂಬರ್ 5 ರಂದು ನಡೆಯಲಿರುವ ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್ ಪಿ) ಗುರುವಾರ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್...
Published: 10th November 2022 03:10 PM | Last Updated: 10th November 2022 03:10 PM | A+A A-

ಡಿಂಪಲ್ ಯಾದವ್
ಲಖನೌ: ಡಿಸೆಂಬರ್ 5 ರಂದು ನಡೆಯಲಿರುವ ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್ ಪಿ) ಗುರುವಾರ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರು ಕಣಕ್ಕಿಳಿಯಲಿದ್ದಾರೆ.
ಎಸ್ ಪಿ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದ ನಂತರ ತೆರವಾದ ಮೈನ್‌ಪುರಿ ಕ್ಷೇತ್ರಕ್ಕೆ ಈಗ ಉಪ ಚುನಾವಣೆ ನಡೆಯುತ್ತಿದ್ದು, ಸಮಾಜವಾದಿ ಪಕ್ಷದಿಂದ ಡಿಂಪಲ್ ಯಾದವ್ ಸ್ಪರ್ಧಿಸಲಿದ್ದಾರೆ.
ಇದನ್ನು ಓದಿ: ಅಜಂ ಖಾನ್ ಅನರ್ಹತೆ: ನವೆಂಬರ್ 10ರ ವರೆಗೆ ಉಪಚುನಾವಣೆ ಘೋಷಿಸದಂತೆ ಇಸಿಗೆ 'ಸುಪ್ರೀಂ' ಸೂಚನೆ
"ಮೈನ್‌ಪುರಿ ಲೋಕಸಭಾ ಉಪಚುನಾವಣೆಯಲ್ಲಿ ಡಿಂಪಲ್ ಯಾದವ್ ಅವರು ತಮ್ಮ ಪಕ್ಷದ ಅಭ್ಯರ್ಥಿ ಎಂದು" ಎಂದು ಸಮಾಜವಾದಿ ಪಕ್ಷ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ತಿಳಿಸಿದೆ.
"ಮಾಜಿ ಸಂಸದೆ ಡಿಂಪಲ್ ಯಾದವ್ ಅವರನ್ನು ಮೈನ್‌ಪುರಿ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ" ಎಂದು ಪಕ್ಷದ ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ಪಟೇಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಸೆಂಬರ್ 5 ರಂದು ಮೈನ್‌ಪುರಿ ಉಪ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.