ಕಾಶ್ಮೀರ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ: ಮತ್ತೆ 7 ಜನರನ್ನು ಬಂಧಿಸಿದ ಸಿಬಿಐ
ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ಸಿಆರ್‌ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ ಮತ್ತೆ ಏಳು ಜನರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
Published: 10th November 2022 07:37 PM | Last Updated: 10th November 2022 07:37 PM | A+A A-

ಕೇಂದ್ರ ತನಿಖಾ ಸಂಸ್ಥೆ ಸಿಬಿಐ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ಸಿಆರ್‌ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ ಮತ್ತೆ ಏಳು ಜನರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಬಂಧಿತ ಈ ಆರೋಪಿಗಳನ್ನು ಜಮ್ಮುವಿನಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ ನಂತರ ಸಿಬಿಐ ವಶಕ್ಕೆ ಪಡೆದಿದೆ ಎಂದು ಅವರು ಹೇಳಿದ್ದಾರೆ.
ಸಿಆರ್‌ಪಿಎಫ್ ಹೆಡ್ ಕಾನ್ಸ್‌ಟೇಬಲ್ ಪವನ್ ಕುಮಾರ್, ಸಿಆರ್‌ಪಿಎಫ್ ಕಾನ್‌ಸ್ಟೆಬಲ್‌ಗಳಾದ ಅತುಲ್ ಕುಮಾರ್, ಅಮಿತ್ ಕುಮಾರ್ ಶರ್ಮಾ ಮತ್ತು ಸುನೀಲ್ ಶರ್ಮಾ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಜೈಸೂರಿಯಾ ಶರ್ಮಾ ಮತ್ತು ಖಾಸಗಿ ವ್ಯಕ್ತಿಗಳಾದ ತಾರ್ಸೆಮ್ ಲಾಲ್ ಹಾಗೂ ಆಶೀಶ್ ಯಾದವ್ ಅವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನು ಓದಿ: ಜಮ್ಮು- ಕಾಶ್ಮೀರ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ: ಬೆಂಗಳೂರಿನ 36 ಕಡೆ ಸಿಬಿಐ ದಾಳಿ, ಪರಿಶೀಲನೆ
ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಮಂಗಳವಾರ ಜಮ್ಮು, ಪಠಾಣ್‌ಕೋಟ್, ರೆವಾರಿ ಮತ್ತು ಕರ್ನಾಲ್‌ನ ಏಳು ಸ್ಥಳಗಳಲ್ಲಿ ದಾಳಿ ನಡೆಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ 13 ಮಂದಿಯನ್ನು ಬಂಧಿಸಲಾಗಿತ್ತು.