ಜಮ್ಮು-ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ: 2 ಬಸ್'ಗಳು ಮುಖಾಮುಖಿ ಡಿಕ್ಕಿ; 3 ಸಾವು, 17ಕ್ಕೂ ಹೆಚ್ಚು ಮಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 17ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.
Published: 10th November 2022 08:19 AM | Last Updated: 10th November 2022 04:10 PM | A+A A-

ಅಪಘಾತಕ್ಕೀಡಾಗಿರುವ ಬಸ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ 17ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಎರಡು ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಪಘಾತದಲ್ಲಿ 13 ವರ್ಷದ ಬಾಲಕಿ, ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಶ್ಮೀರ: ಆಕಸ್ಮಿಕವಾಗಿ ಸರ್ವಿಸ್ ರೈಫಲ್ ನಿಂದ ಹಾರಿದ ಗುಂಡು, ಯೋಧ ಸಾವು
Samba, J&K | Three dead in bus collision at Jammu-Pathankot National Highway
— ANI (@ANI) November 10, 2022
17 injured, 3 including a 13-year-old girl killed. At least 7 have been referred to other hospitals as they received multiple injuries: Dr Bharat Bhushan, Medical officer of Samba dist hospital (09.11) pic.twitter.com/ZbuwP3vj6x
ಮೃತರನ್ನು ಮಂಗಿ ದೇವಿ (36), 13 ವರ್ಷದ ಬಾಲಕಿ ತಾನಿಯಾ ಹಾಗೂ ಕಸ್ತೂರಿ ಲಾಲ್ (58) ಎಂದು ಗುರ್ತಿಸಲಾಗಿದೆ.
ಘಟನೆ ಕುರಿತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ, ಅಗತ್ಯ ನೆರು ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.