ಮೂರು ವರ್ಷ ಜೈಲು ಶಿಕ್ಷೆ ಪ್ರಶ್ನಿಸಿ ಅಜಂ ಖಾನ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ರಾಂಪುರ ಸೆಷನ್ಸ್ ನ್ಯಾಯಾಲಯವು...
ಆಜಂ ಖಾನ್
ಆಜಂ ಖಾನ್

ರಾಂಪುರ: ದ್ವೇಷ ಭಾಷಣ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ರಾಂಪುರ ಸೆಷನ್ಸ್ ನ್ಯಾಯಾಲಯವು ಗುರುವಾರ ವಜಾಗೊಳಿಸಿದೆ.

ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಲಯವು ಖಾನ್ ಅವರ ಮನವಿಯನ್ನು ತಿರಸ್ಕರಿಸಿತು.

ಅಕ್ಟೋಬರ್ 27 ರಂದು ದ್ವೇಷ ಭಾಷಣ ಪ್ರಕರಣದಲ್ಲಿ ಅಜಂ ಖಾನ್ ದೋಷಿ ಎಂದು ತೀರ್ಪು ನೀಡಿದ್ದ ರಾಂಪುರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಜಂ ಖಾನ್ ಅವರು ಇದನ್ನು ಪ್ರಶ್ನಿಸಿ ರಾಂಪುರ ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ನಿನ್ನೆಯಷ್ಟೇ ಅಜಂ ಖಾನ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರವೇ ನಡೆಸಿ ತೀರ್ಪು ನೀಡುವಂತೆ ಸೆಷನ್ಸ್ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಅದರಂತೆ ಸೆಷನ್ಸ್ ಕೋರ್ಟ್ ಇಂದು ಅಜಂ ಖಾನ್ ಅರ್ಜಿ ವಜಾಗೊಳಿಸಿ  ತೀರ್ಪು ನೀಡಿದ್ದು, ಚುನಾವಣೆ ಆಯೋಗ ಉಪ ಚುನವಾಣೆ ಘೋಷಿಸಲು ದಾರಿ ಮಾಡಿಕೊಟ್ಟಿದೆ.

ಖಾನ್ ಅವರ ಅರ್ಜಿ ವಿಚಾರಣೆ ನಡೆಸಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದ ನಂತರ ಚುನಾವಣಾ ಆಯೋಗ ನವೆಂಬರ್ 11 ಅಥವಾ ನಂತರ ಉಪಚುನಾವಣೆಗೆ ಅಧಿಸೂಚನೆಯನ್ನು ಹೊರಡಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com