ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಶರದ್ ಪವಾರ್, ಕಾಂಗ್ರೆಸ್ ಜೋಡೋ ಯಾತ್ರೆಗೆ ಗೈರು
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರ್ನಾಲ್ಕು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಜೋಡೋ ಯಾತ್ರೆಗೆ ಗೈರಾಗಿದ್ದಾರೆ.
Published: 10th November 2022 12:24 PM | Last Updated: 11th November 2022 03:39 PM | A+A A-

ಶರದ್ ಪವಾರ್
ಮುಂಬೈ: ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರ್ನಾಲ್ಕು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಜೋಡೋ ಯಾತ್ರೆಗೆ ಗೈರಾಗಿದ್ದಾರೆ.
ಶರದ್ ಪವಾರ್ ನಾಳೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ಅವರಿಗೆ ಅನಾರೋಗ್ಯದ ಕಾರಣ ಆಸ್ಪತ್ರೆ ಸೇರಿದ್ದು, ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿಲ್ಲ, ಶಿವಸೇನೆ ಉದ್ದವ್ ಠಾಕ್ರೆ ಬಣದಿಂದ ಆದಿತ್ಯ ಠಾಕ್ರೆ ಭಾಗವಹಿಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ: 4ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ ಯಾತ್ರೆ, ಸಂಜೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್ ಭಾಷಣ
#UPDATE | NCP chief Sharad Pawar is in hospital, Rahul Gandhi & I talked to him. The doctor has recommended a 3-4-week rest. Hence, Sharad Pawar will not be joining the 'Bharat Jodo Yatra' tomorrow. Aaditya Thackeray will join tomorrow: Congress General Secretary Jairam Ramesh
— ANI (@ANI) November 10, 2022
ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರದಲ್ಲಿ ಇಂದಿಗೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ನಾಂದೇಡ್ ನಲ್ಲಿ ಸಂಜೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ.