ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗುಜರಾತ್‌ ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ತಡರಾತ್ರಿ ಬಿಡುಗಡೆ ಮಾಡಿದೆ.

ನವದೆಹಲಿ: ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 46 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ತಡರಾತ್ರಿ ಬಿಡುಗಡೆ ಮಾಡಿದೆ.

ಇದರೊಂದಿಗೆ, ಗುಜರಾತ್‌ ಚುನಾವಣೆಗೆ ಕಾಂಗ್ರೆಸ್‌ ಈ ವರೆಗೆ 89 ಅಭ್ಯರ್ಥಿಗಳನ್ನು ಘೋಷಣೆ ಮಾಡಿದಂತಾಗಿದೆ. ಕಾಂಗ್ರೆಸ್ ಕಳೆದ ಶುಕ್ರವಾರ 43 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ತ್ರಿಕೋನ ಸ್ಪರ್ಧೆ ಏರ್ಪಟ್ಟಿರುವ ಗುಜರಾತ್‌ನಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಆಮ್‌ ಆದ್ಮಿ ಪಕ್ಷಗಳು ಪೈಪೋಟಿ ನಡೆಸಿವೆ. ಬಿಜೆಪಿ ಹಾಗೂ ಎಎಪಿ ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿವೆ. ಆದರೆ, ಕಾಂಗ್ರೆಸ್‌ ಮಾತ್ರ ಮೌನಕ್ಕೆ ಶರಣಾಗಿದೆ.

ಭುಜ್‌ನಿಂದ ಅರ್ಜುನ್‌ಭಾಯ್ ಭುಡಿಯಾ, ಜುನಾಗಢದಿಂದ ಭಿಖಾಭಾಯಿ ಜೋಶಿ, ಪೂರ್ವ ಸೂರತ್‌ನಿಂದ ಅಸ್ಲಾಂ ಸೈಕಲ್‌ವಾಲಾ, ಉತ್ತರ ಸೂರತ್‌ನಿಂದ ಅಶೋಕ್‌ಭಾಯ್ ಪಟೇಲ್ ಮತ್ತು ವಲ್ಸಾದ್‌ನಿಂದ ಕಮಲಕುಮಾರ್ ಪಟೇಲ್ ಅವರನ್ನು ಕಣಕ್ಕಿಳಿಸಲಾಗಿದೆ. ಪ್ರಧಾನಿ ಮೋದಿ ಅವರ ತವರು ರಾಜ್ಯದಲ್ಲಿ ಬಿಜೆಪಿ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಅಧಿಕಾರದಲ್ಲಿದೆ. ಸರ್ಕಾರ ಕಿತ್ತೊಗೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

2017ರಲ್ಲಿ ನಡೆದ ಗುಜರಾತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಗುಜರಾತ್‌ ವಿಧಾನಸಭೆಯ ಒಟ್ಟು 180 ಕ್ಷೇತ್ರಗಳ ಪೈಕಿ 77 ರಲ್ಲಿ ಕಾಂಗ್ರೆಸ್‌ ಜಯ ಸಾಧಿಸಿತ್ತು. 99 ಕ್ಷೇತ್ರಗಳನ್ನು ಬಿಜೆಪಿ ತನ್ನದಾಗಿಸಿಕೊಂಡಿತ್ತು. ಆದರೆ, ಈ ಸಾರಿಯ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಎಎಪಿ ಗುಜರಾತ್‌ ಚುನಾವಣಾ ಕಣಕ್ಕೆ ದುಮುಕಿದೆ. 182 ಸದಸ್ಯ ಬಲದ ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಡಿಸೆಂಬರ್ 8 ರಂದು ಹೊರಬೀಳಲಿದೆ.

Related Stories

No stories found.

Advertisement

X
Kannada Prabha
www.kannadaprabha.com