ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ತಮಿಳುನಾಡಿನಲ್ಲಿ ಭಾರೀ ಮಳೆ, ಶಾಲಾ-ಕಾಲೇಜುಗಳಿಗೆ ರಜೆ

ತಮಿಳುನಾಡಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿನ ವಾಯು ಭಾರ ಕುಸಿತದ ಪ್ರಭಾವದಿಂದ ಚೆನ್ನೈನ ಹಲವಾರು ಭಾಗಗಳು ಮತ್ತು ನೆರೆಯ ಜಿಲ್ಲೆಗಳಾದ ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್‌ಪೇಟ್‌ನಲ್ಲಿ ಭಾರೀ ಮಳೆಯಾಗುತ್ತಿದೆ.
ಜತಾವೃತಗೊಂಡಿರುವ ರಸ್ತೆಗಳು
ಜತಾವೃತಗೊಂಡಿರುವ ರಸ್ತೆಗಳು

ಚೆನ್ನೈ: ತಮಿಳುನಾಡಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಶ್ರೀಲಂಕಾ ಕರಾವಳಿಯ ಬಂಗಾಳ ಕೊಲ್ಲಿಯಲ್ಲಿ  ವಾಯು ಭಾರ ಕುಸಿತದ ಪ್ರಭಾವದಿಂದ ಚೆನ್ನೈನ ಹಲವಾರು ಭಾಗಗಳು ಮತ್ತು ನೆರೆಯ ಜಿಲ್ಲೆಗಳಾದ ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್‌ಪೇಟ್‌ನಲ್ಲಿ ಭಾರೀ ಮಳೆಯಾಗುತ್ತಿದೆ.

ಇದರಿಂದಾಗಿ ಚೆನ್ನೈ ನಗರದ ಹಲವೆಡೆ ಜಲಾವೃತವಾಗಿದೆ. ವಿಲ್ಲುಪುರಂ, ರಾಮನಾಥ ಪುರಂ ಮತ್ತಿತರ ಕರಾವಳಿ ತೀರ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ವರದಿಯಾಗಿದೆ. ಚೆನ್ನೈ, ಚೆಂಗಲ್ ಪೇಟೆ, ಕಂಚೀಪುರಂ, ತಿರುವಲ್ಲೂರು, ವಿಲ್ಲುಪುರಂ ಸೇರಿದಂತೆ ಹಲವೆಡೆ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮುಂದುವರಿದಿದೆ ಮತ್ತು ಮುಂದಿನ 24 ಗಂಟೆಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇದು ನವೆಂಬರ್ 12ರ ಮುಂಜಾನೆಯವರೆಗೂ  ತಮಿಳುನಾಡು-ಪುದುಚೇರಿ ಕರಾವಳಿ ಕಡೆಗೆ ತಿರುಗುವ ಸಾಧ್ಯತೆಯಿದೆ. ಮುಂದಿನ ಮೂರು ದಿನಗಳ ಕಾಲ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಭಾರೀ ಮಳೆಯಿಂದಾಗಿ ಶುಕ್ರವಾರ ಮತ್ತು ಶನಿವಾರ ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಪ್ರಾದೇಶಿಕ ಸರ್ಕಾರ ರಜೆ ಘೋಷಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com