ಬೆಂಗಳೂರು ಶೋ ರದ್ದು; ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ರನ್ನು ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ

ದೇಶದ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಕೊನೆಯ ಕ್ಷಣದಲ್ಲಿ ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ಪ್ರದರ್ಶನವನ್ನು ರದ್ದುಗೊಳಿಸಲಾಗಿತ್ತು.
ವೀರ್ ದಾಸ್-ಡೆರೆಕ್ ಒ ಬ್ರೇನ್
ವೀರ್ ದಾಸ್-ಡೆರೆಕ್ ಒ ಬ್ರೇನ್
Updated on

ನವದೆಹಲಿ: ದೇಶದ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಕೊನೆಯ ಕ್ಷಣದಲ್ಲಿ ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ಪ್ರದರ್ಶನವನ್ನು ರದ್ದುಗೊಳಿಸಲಾಗಿದ್ದು ಇದರ ಬೆನ್ನಲ್ಲೇ ಟಿಎಂಸಿ ಸಂಸದ ಡೆರೆಕ್ ಒ'ಬ್ರೇನ್ ಅವರು ವೀರ್ ದಾಸ್ ನನ್ನು ಕೋಲ್ಕತ್ತಾಕ್ಕೆ ಆಹ್ವಾನಿಸಿದ್ದಾರೆ.

'ಹಲೋ ವೀರ್ ದಾಸ್ ನೀವು ಕೋಲ್ಕತ್ತಾಗೆ ಬನ್ನಿ. ಈ ಚಳಿಗಾಲದಲ್ಲಿ ನಾವು ನಿಮ್ಮನ್ನು ಇಲ್ಲಿ ನೋಡಲು ಬಯಸುತ್ತೇವೆ. ಕೋಲ್ಕತ್ತಾಗೆ ಬಂದರೆ ದಯವಿಟ್ಟು ನನಗೆ ಮೇಸೆಜ್ ಮಾಡಿ. ಇದನ್ನು ಮುಂದುವರಿಸೋಣ' ಎಂದು TMC ಸಂಸದ ಡೆರೆಕ್ ಒ'ಬ್ರೇನ್ ಟ್ವೀಟ್ ಮಾಡಿದ್ದಾರೆ.

ವಿರೋಧ ಯಾಕೆ?
ಅಮೆರಿಕದಲ್ಲಿ ಭಾರತದ ಬಗ್ಗೆ ಅತ್ಯಂತ ಕೆಟ್ಟದಾಗಿ ವೀರ್ ದಾಸ್ ಹಾಸ್ಯ ಮಾಡಿ ಅವಹೇಳನ ಮಾಡಿದ್ದನು. ಈ ಕಾರಣಕ್ಕಾಗಿ ಮುಂಬೈ ಪೋಲಿಸರು ಇವನ ಮೇಲೆ ಪ್ರಕರಣವನ್ನು ದಾಖಲಿಸಿದ್ದರು. ವಿದೇಶದಲ್ಲಿ ಭಾರತದ ಪ್ರಧಾನಿ ಮತ್ತು ಭಾರತದ ಮಹಿಳೆಯರ ವಿರುದ್ಧ ಮತ್ತು ಭಾರತದ ಘನತೆಯ ಬಗ್ಗೆ ಅತ್ಯಂತ ಕೆಟ್ಟದಾಗಿ ಅಪಮಾನ ಮಾಡಿದ ವ್ಯಕ್ತಿಯ ಕಾರ್ಯಕ್ರಮಕ್ಕೆ ನಮ್ಮ ರಾಜ್ಯದಲ್ಲಿ ಅವಕಾಶ ಕೊಡಬಾರದು ಎಂದು ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.

ಅಲ್ಲದೆ ಈತ ಕೆಲವು ದಿನಗಳ ಹಿಂದೆ ಅಮೇರಿಕದ ವಾಷಿಗ್ಟನ್ ಡಿಸಿಯಲ್ಲಿ ಮಾತನಾಡಿದ ಒಂದು ವಿಡಿಯೋದಲ್ಲಿ ತಾನು ಮಹಿಳೆಯರನ್ನು ಬೆಳಗ್ಗೆ ಪೂಜೆ ಮಾಡಿ ರಾತ್ರಿ ಅವರ ಮೇಲೆ ಅತ್ಯಾಚಾರ ಮಾಡುವ ಭಾರತದಿಂದ ಬಂದಿದ್ದೇನೆ ಎಂದು ದೇಶದ ಮಹಿಳೆಯರ ಬಗ್ಗೆ ಕೆಟ್ಟದಾಗಿ ಅಪಮಾನ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ವಿಡಿಯೋ ಬಿಡುಗಡೆ ಮಾಡಿದ ಹಾಸ್ಯ ಕಲಾವಿದ
ಜಸ್ಟ್ ಇನ್ ಕೇಸ್ ಎಂಬ ನನ್ನ ಶೋ ಒಂದರ ನಂತರ ನಾನು ಈ ವೀಡಿಯೊವನ್ನು ಮಾಡಿದ್ದೇನೆ. ಮಾಧ್ಯಮದ ಮುಖ್ಯಾಂಶಗಳಿಗೆ ನನ್ನ ಬಳಸುವುದರಲ್ಲಿ ನನಗೆ ಆಸಕ್ತಿಯಿಲ್ಲ. ನಾನೊಬ್ಬ ಕಲಾವಿದ. ನಾನು ಸುದ್ದಿಯಲ್ಲಿ ಇರಬಾರದು. ನನ್ನ ವಿಷಯದ ಬಗ್ಗೆ ಅನೇಕ ಊಹೆಗಳನ್ನು ಮಾಡಲಾಗಿದೆ. ನನ್ನ ಕಲೆ ಮತ್ತು ನನ್ನ ಪ್ರೇಕ್ಷಕರು ನನ್ನ ಪರವಾಗಿ ಮಾತನಾಡುತ್ತಾರೆ ಎಂದು ನಾನು ನಂಬುತ್ತೇನೆ ಎಂದು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com