ರಾಷ್ಟ್ರಪತಿಗಳ ಕುರಿತು ವಿವಾದಾತ್ಮಕ ಹೇಳಿ: ಕ್ಷಮೆಯಾಚಿಸಿದ ಪಶ್ಚಿಮ ಬಂಗಾಳ ಸಚಿವ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಾಕಾರಿ ಹೇಳಿಕೆ ನೀಡುವ ಮೂಲಕ ವಿವಾದದಲ್ಲಿ ಸಿಲುಕಿದ್ದ ಪಶ್ಚಿಮ ಬಂಗಾಳ ಸಚಿವ ಅಖಿಲ್ ಗಿರಿ ಅವರು ವ್ಯಾಪಕ ಟೀಕೆಯ ನಂತರ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಟಿಎಂಸಿ ಸಚಿವ ಅಖಿಲ್ ಗಿರಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಟಿಎಂಸಿ ಸಚಿವ ಅಖಿಲ್ ಗಿರಿ

ನಂದಿಗ್ರಾಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಾಕಾರಿ ಹೇಳಿಕೆ ನೀಡುವ ಮೂಲಕ ವಿವಾದದಲ್ಲಿ ಸಿಲುಕಿದ್ದ ಪಶ್ಚಿಮ ಬಂಗಾಳ ಸಚಿವ ಅಖಿಲ್ ಗಿರಿ ಅವರು ವ್ಯಾಪಕ ಟೀಕೆಯ ನಂತರ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

ಗಿರಿ ಅವರ ಹೇಳಿಕೆಯ ವೀಡಿಯೊ ಕ್ಲಿಪ್ ವೈರಲ್ ಆದ ನಂತರ ಪ್ರತಿಪಕ್ಷ ಬಿಜೆಪಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅವರ ಪಕ್ಷ ಬುಡಕಟ್ಟು ವಿರೋಧಿ ಎಂದು ಟೀಕಿಸಿತ್ತು.

"ಗೌರವಾನ್ವಿತ ರಾಷ್ಟ್ರಪತಿಗಳಿಗೆ ಅಗೌರವ ತೋರುವ ಯಾವುದೇ ಉದ್ದೇಶ ನನಗೆ ಇರಲಿಲ್ಲ. ಬಿಜೆಪಿ ನಾಯಕರು ನನ್ನ ಮೇಲೆ ವಾಗ್ದಾಳಿ ನಡೆಸಿದ್ದಕ್ಕೆ ಉತ್ತರ ನೀಡುತ್ತಿದ್ದೇನೆ. ಇಂತಹ ಹೇಳಿಕೆ ನೀಡಿದ್ದಕ್ಕೆ ನಾನು ಕ್ಷಮೆಯಾಚಿಸುತ್ತೇನೆ. ನಮ್ಮ ದೇಶದ ರಾಷ್ಟ್ರಪತಿಗಳ ಬಗ್ಗೆ ನನಗೆ ಅಪಾರ ಗೌರವವಿದೆ" ಎಂದು ಅಖಿಲ್ ಗಿರಿ ಹೇಳಿದ್ದಾರೆ.

ಶುಕ್ರವಾರ ನಂದಿಗ್ರಾಮದ ಹಳ್ಳಿಯೊಂದರಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಗಿರಿ, "ನಾನು ನೋಡಲು ಚೆನ್ನಾಗಿಲ್ಲ ಎಂದು ಅವರು(ಬಿಜೆಪಿ) ಹೇಳುತ್ತಾರೆ. ಯಾರನ್ನೂ ಅವರ ಬಾಹ್ಯ ನೋಟದಿಂದ ತೀರ್ಮಾನಿಸಬಾರದು. ನಾವು ರಾಷ್ಟ್ರಪತಿ ಕಚೇರಿಯನ್ನು ಗೌರವಿಸುತ್ತೇವೆ. ಆದರೆ ನಮ್ಮ ರಾಷ್ಟ್ರಪತಿ ನೋಡಲು ಹೇಗಿದ್ದಾರೆ?" ಎಂದು ಪ್ರಶ್ನಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com